
ಕಾರ್ಕಳ: ಇಲ್ಲಿನ ಶ್ರೀರವಿಶಂಕರ ವಿದ್ಯಾಮಂದಿರ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವುಗಳ ಸಹಯೋಗದಲ್ಲಿ ‘ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ’ವು ರವಿಶಂಕರ ವಿದ್ಯಾ ಮಂದಿರದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಕಳ ತಾಲ್ಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಅಧ್ಯಕ್ಷೆ ಜ್ಯೋತಿ ಜೆ.ಪೈ. ಅಧ್ಯಕ್ಷತೆ ವಹಿಸಿದ್ದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಮೈಸೂರು ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಕಮಿಷನರ್ ಡಾ. ಎಂ.ಮೋಹನ ಆಳ್ವ, ಹಿರಿಯ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಅತಿಥಿ ಸಂಸ್ಥೆಯ ಉಪಾಧ್ಯಕ್ಷೆ ಸಾವಿತ್ರಿ ಮನೋಹರ್, ಜಗದೀಶ್ ಹೆಗ್ಡೆ, ಕೋಶಾಧಿಕಾರಿ ಸತೀಶ್ ಶೆಟ್ಟಿ, ರಾಜ್ಯ ಸಹ ಸಂಘಟಕ ಸುಮನಾ ಶೇಖರ, ಹಿರಿಯ ಗೈಡ್ ಯಶೋದಾ ಹೆಗ್ಡೆ, ಜೊತೆ ಕಾರ್ಯದರ್ಶಿ ಸೀಮಾ ಕಾಮತ್ ಇದ್ದರು.
ರವಿಶಂಕರ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಸೋನಾಲ್ ಕಾಮತ್ ಸ್ವಾಗತಿಸಿದರು. ಶಿಬಿರ ನಾಯಕಿ ಶಿಕ್ಷಕಿ ಚಿತ್ರಾ ಪೈ ದಿನದ ಕಾರ್ಯಕ್ರಮದ ಮುನ್ನೋಟ ನೀಡಿದರು. ಶಿಕ್ಷಕಿ ಭವಾನಿ ನಿರೂಪಿಸಿದರು. ತಾಲ್ಲೂಕಿನ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಗಣೇಶ್ ಜಾಲ್ಸೂರು ವಂದಿಸಿದರು.
ಬಳಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪೇಪರ್ ಕ್ರಾಫ್ಟ್, ಚಿತ್ರಕಲೆ, ಜಾನಪದ ನೃತ್ಯ, ರಸ ಪ್ರಶ್ನೆ, ಮೂಕಾಭಿನಯ, ವಿವಿಧತೆಯಲ್ಲಿ ಏಕತೆ, ಬೆಂಕಿ ಬಳಸದೇ ತಿಂಡಿ ತಯಾರಿ ಚಟುವಟಿಕೆಗಳನ್ನು ಆಯೋಜಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.