ADVERTISEMENT

ಕಾರ್ಕಳ | ಅಂತರಂಗ ಶುದ್ಧಿಯಿಂದ ದೇಶದಲ್ಲಿ ಶಾಂತಿ: ಪ್ರೊ. ಜೋಸೆಫ್ ಎನ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 6:57 IST
Last Updated 3 ಡಿಸೆಂಬರ್ 2022, 6:57 IST
ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಜೋಸೆಫ್ ಎನ್.ಎಂ. ಉದ್ಘಾಟಿಸಿದರು
ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಜೋಸೆಫ್ ಎನ್.ಎಂ. ಉದ್ಘಾಟಿಸಿದರು   

ಕಾರ್ಕಳ: ಅಂತರಂಗ ಶುದ್ಧಿಯ ಮೂಲಕ ದೇಶದ ಸಮಗ್ರ ಶಾಂತಿಯನ್ನು ಕಾಪಾಡಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಪ್ರೊ. ಜೋಸೆಫ್ ಎನ್.ಎಂ. ಹೇಳಿದರು.

ಇಲ್ಲಿನ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ಸದೃಢವಾಗಿ ರೂಪಿಸಿಕೊಳ್ಳಬೇಕು. ಎಂದರು.

ಸಂಸ್ಥೆಯ ಕಾರ್ಯದರ್ಶಿ ಕೆ.ಪಿ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಉಷಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿಕ್ಷೇಮಾಧಿಕಾರಿ ಚಿದಾನಂದ ಶೆಟ್ಟಿ ವಂದಿಸಿದರು. ವಿದ್ಯಾರ್ಥಿ ಸಂಘದ ನಾಯಕಿಯರಾದ ಶ್ರೀನಿಧಿ ನಾಯಕ್, ಕನಕ, ಚೈತ್ರಾ.ಜಿ, ಶ್ರೀನಿಧಿ ದೇವಾಡಿಗ ಇದ್ದರು. ಪ್ರತೀಕ್ಷಾ ಪೂಜಾರಿ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.