ಮಹೇಶ್ ಶೆಟ್ಟಿ ಅವರನ್ನು ಬ್ರಹ್ಮಾವರದ ನ್ಯಾಯಾಲಯದ ಸಂಚಾರಿ ಪೀಠಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯದ ಆವರಣದಲ್ಲಿ ಸೇರಿದ್ದ ಬೆಂಬಲಿಗರು
ಕಾರ್ಕಳ (ಉಡುಪಿ): ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ಬ್ರಹ್ಮಾವರಕ್ಕೆ ಕರೆದೊಯುತ್ತಿದ್ದ ವೇಳೆ, ತಾಲ್ಲೂಕಿನ ಹೊಸ್ಮಾರಿನಲ್ಲಿ ತಿಮರೋಡಿ ಬೆಂಬಲಿಗರ ಕಾರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಾಹನಕ್ಕೆ ಗುದ್ದಿದೆ.
ಕಾರನ್ನು ವಶಕ್ಕೆ ಪಡೆದು, ಅದರಲ್ಲಿದ್ದ ಬೆಳ್ತಂಗಡಿ ತಾಲ್ಲೂಕಿನ ಸೃಜನ್ ಎಲ್., ಹಿತೇಶ್, ಸಹನ್ ಎಂಬುವವರನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.