ADVERTISEMENT

ಕಾರ್ಕಳ | ಕೀಟನಾಶಕ ಸೇವಿಸಿ ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 13:53 IST
Last Updated 22 ಜೂನ್ 2025, 13:53 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕಾರ್ಕಳ: ಮಹಿಳೆಯೊಬ್ಬರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಅಜೆಕಾರಿನಲ್ಲಿ ನಡೆದಿದೆ.

ADVERTISEMENT

ಗೀತಾ (52) ಎಂಬುವರು ಆತ್ಮಹತ್ಯೆ ಮಾಡಿಕೊಂಡವರು.

ಅವರಿಗೆ 20 ವರ್ಷದ ಹಿಂದೆ ಕೇರಳದ ಕುರಿಯಕೋಸ್ ಎಂಬುವರನ್ನು ವಿವಾಹವಾಗಿದ್ದು, 2 ವರ್ಷಗಳ ಹಿಂದೆ ಕುರಿಯಕೋಸ್ ಅಸೌಖ್ಯದಿಂದ ಮೃತಪಟ್ಟಿದ್ದರು. 10 ತಿಂಗಳ ಹಿಂದೆ ಅಜೆಕಾರಿನ ಕೆ.ಪಿ.ಅಬ್ರಹಾಂ ಎಂಬುವರನ್ನು ಮದುವೆಯಾಗಿದ್ದರು. ಗೀತಾ ಅವರು ಕೀಟನಾಶಕ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಹಿಂದೆಯೂ 3 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.