ADVERTISEMENT

ರಾಜ್ಯದ ವಿವಿಧೆಡೆ ಪ್ರತ್ಯೇಕ ಅವಘಡ: ಆರು ಸಾವು

​ಪ್ರಜಾವಾಣಿ ವಾರ್ತೆ
Published 26 ಜನವರಿ 2026, 18:59 IST
Last Updated 26 ಜನವರಿ 2026, 18:59 IST
ಶಂಕರಪ್ಪ
ಶಂಕರಪ್ಪ   

ಉಡುಪಿ/ತುಮಕೂರು: ರಾಜ್ಯದ ವಿವಿಧೆಡೆ ಸೋಮವಾರ ನಡೆದ ಪ್ರತ್ಯೇಕ ಅವಘಡಗಳಲ್ಲಿ ಆರು ಮಂದಿ ಮೃತಪಟ್ಟಿದ್ದು, ಐವರು ಗಾಯಗೊಡಿದ್ದಾರೆ.

ಉಡುಪಿ ವರದಿ: ಮಲ್ಪೆ ಸಮೀಪದ ಕೋಡಿಬೆಂಗ್ರೆ ಅಳಿವೆ ಪ್ರದೇಶದಲ್ಲಿ ದೋಣಿ ಮಗುಚಿ ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ (27), ಮೂಗೂರು ಗ್ರಾಮದ ಸಿಂಧು (25) ಮೃತಪಟ್ಟರು.

ದಿಶಾ ಅಸ್ವಸ್ಥಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಡೆಲ್ಟಾ ಬೀಚ್‌ ಪಾಯಿಂಟ್‌ನಿಂದ 14 ಮಂದಿ ಪ್ರವಾಸಿಗರು ತೆರಳಿದ್ದರು. ಕೆಲವರು ಲೈಫ್‌ ಜಾಕೆಟ್‌ ಧರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಪ್ರವಾಸಿಗರು ಮೈಸೂರಿನ ಸರಸ್ವತಿಪುರದ ಕಾಲ್‌ಸೆಂಟರ್‌ನ ನೌಕರರು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದರು.

ವಿದ್ಯಾರ್ಥಿನಿ ಸಾವು

ಗೋಕರ್ಣ ವರದಿ: ಇಲ್ಲಿಯ ಮೇನ್ ಬೀಚಿನ ಸಮುದ್ರದ ನೀರಿನಲ್ಲಿ ಭಾನುವಾರ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದು, ಇನ್ನೊಬ್ಬ ವಿದ್ಯಾರ್ಥಿಯನ್ನು ರಕ್ಷಿಸಲಾಗಿದೆ.

‘ಕೇರಳ ಕೊಲ್ಲಮ್ ಜಿಲ್ಲೆಯ ಕೊಟ್ಟಾಪುರಂ ನಿವಾಸಿ  ಕಲ್ಯಾಣಿ ಅಜೇಯ ಪಿಳ್ಳೆ (22) ಮೃತರು. ಯಾದಗಿರಿಯ ಮಹಮ್ಮದ್ ಯೂಸಫ್ ಅಲಿ (23) ಅವರನ್ನು ರಕ್ಷಿಸಲಾಗಿದೆ. ಕೊಪ್ಪಳದ ವೈದ್ಯಕೀಯ ಕಾಲೇಜಿನ 12 ಮಂದಿ ವಿದ್ಯಾರ್ಥಿಗಳು ಗೋಕರ್ಣ ಪ್ರವಾಸಕ್ಕೆ ಬಂದಿದ್ದಾಗ ಅವಘಡ ಸಂಭವಿಸಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಗೆ ಕಾರು ಡಿಕ್ಕಿ

ತುಮಕೂರು: ತಾಲ್ಲೂಕಿನ ನೆಲಹಾಳ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಿಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಅನಿಕೇತ್‌ (25), ಪಂಜಾಬ್‌ನ ಅಬೀರ್‌ (25), ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸನ್ಮುಕ್ತಿ (22) ಮೃತರು. ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲರೂ ಬೆಂಗಳೂರಿನ ಐ.ಟಿ ಕಂಪನಿಗಳ ಉದ್ಯೋಗಿಗಳು. ವಾರಾಂತ್ಯ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದರು. ನೆಲಹಾಳ್‌ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಆಗಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂಧು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.