ADVERTISEMENT

ಉಡುಪಿ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 7:02 IST
Last Updated 25 ಮಾರ್ಚ್ 2023, 7:02 IST
ಗೋಪಾಲ ಪೂಜಾರಿ
ಗೋಪಾಲ ಪೂಜಾರಿ   

ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಟಿಕೆಟ್ ಘೋಷಿಸಿದೆ.

ಕಾಪು ಕ್ಷೇತ್ರದಿಂದ ವಿನಯ ಕುಮಾರ ಸೊರಕೆ, ಬೈಂದೂರಿನಿಂದ ಗೋಪಾಲ ಪೂಜಾರಿ, ಕುಂದಾಪುರ ಕ್ಷೇತ್ರದಿಂದ ಎಂ.ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡಲಾಗಿದೆ.

ಉಡುಪಿ ಹಾಗೂ ಕಾರ್ಕಳ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. ಉಡುಪಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಅಳೆದು ತೂಗಿ ಟಿಕೆಟ್ ನೀಡಬೇಕಾಗಿದೆ, ಕಾರ್ಕಳ ಕ್ಷೇತ್ರದಿಂದ ಹಾಲಿ ಸಚಿವ ವಿ.ಸುನಿಲ್ ಕುಮಾರ್ ವಿರುದ್ಧ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿರುವ ಕಾರಣ ಟಿಕೆಟ್ ಘೋಷಣೆಯಾಗಿಲ್ಲ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.