ADVERTISEMENT

ಉಡುಪಿ ಕ್ಷೇತ್ರದಿಂದ ಪ್ರಸಾದ್‌ಗೆ ಕಾಂಗ್ರೆಸ್ ಟಿಕೆಟ್: ಕಾರ್ಕಳ ಕುತೂಹಲ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 7:22 IST
Last Updated 6 ಏಪ್ರಿಲ್ 2023, 7:22 IST
ಪ್ರಸಾದ್ ರಾಜ್ ಕಾಂಚನ್, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಪ್ರಸಾದ್ ರಾಜ್ ಕಾಂಚನ್, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ   

ಉಡುಪಿ: ಕಾಂಗ್ರೆಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಪ್ರಸಾದ್ ರಾಜ್‌ ಕಾಂಚನ್ ಉದ್ಯಮಿಯಾಗಿದ್ದು ಜಿಲ್ಲಾ ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ.

ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದಿರುವ ಪ್ರಸಾದ್ ರಾಜ್ ಕಾಂಚನ್ ಅವರ ತಾಯಿ ಸರಳಾ ಕಾಂಚನ್ ಹಿಂದೆ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT