ADVERTISEMENT

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 6:20 IST
Last Updated 25 ಸೆಪ್ಟೆಂಬರ್ 2022, 6:20 IST
ಸುನಿಲ್ ಕುಮಾರ್
ಸುನಿಲ್ ಕುಮಾರ್   

ಉಡುಪಿ: ‘ಪೇ ಸಿಎಂ’ ಪೋಸ್ಟರ್ ಅಂಟಿಸಿದ ಡಿ.ಕೆ. ಶಿವಕುಮಾರ್‌, ಇ.ಡಿ. ಕಚೇರಿಗೆ ಹೋಗಿದ್ದು ಯಾಕೆ ಎಂದು ಸಿದ್ದರಾಮಯ್ಯ ಉತ್ತರಿಸಬೇಕು. ಭ್ರಷ್ಟಾಚಾರದ ಬಗ್ಗೆ ವಿಚಾರಣೆಗೆ ಒಳಗಾದವರಿಗೆ ಪೇ ಸಿಎಂ ಪೋಸ್ಟರ್ ಅಂಟಿಸುವ ನೈತಿಕತೆ ಇಲ್ಲ’ ಎಂದು ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದರು.

ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ‘ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ಆಧಾರ ರಹಿತ ಆರೋಪ ಮಾಡುತ್ತಿದೆ. ಭ್ರಷ್ಟಾಚಾರ ನಡೆದಿದ್ದರೆ ನ್ಯಾಯಾಲಯ, ಮುಖ್ಯಮಂತ್ರಿ, ಲೋಕಾಯುಕ್ತಕ್ಕೆ ದೂರು ಕೊಡಲಿ. 10 ದಿನಗಳ ಅಧಿವೇಶನದಲ್ಲಿ ಒಂದು ದಿನವೂ ಭ್ರಷ್ಟಾಚಾರದ ಬಗ್ಗೆ ಚರ್ಚೆ ನಡೆಸಿಲ್ಲ’ ಎಂದು ಟೀಕಿಸಿದರು.

ಪಿಎಫ್‌ಐ ಬಗ್ಗುಬಡಿಯುತ್ತಿರುವ ಎನ್‌ಐಎ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರವು ಪಿಎಫ್‌ಐ ಸಂಘಟನೆಯನ್ನು ಬಗ್ಗು ಬಡಿಯುತ್ತಿದೆ. ಬಂಧಿತರು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದರು. ಜಗತ್ತಿನ ಯಾವುದೇ ರಾಷ್ಟ್ರದಿಂದ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ಭಾರತ ಹಿಂದೂ ರಾಷ್ಟ್ರವಾಗಿದ್ದು, ಹಿಂದೂ ಸಂಸ್ಕೃತಿಯ ಮೇಲೆ ಮತ್ತಷ್ಟು ಸಬಲಗೊಳಿಸುತ್ತೇವೆ’ ಎಂದರು.

ADVERTISEMENT

ಸಿದ್ದರಾಮಯ್ಯ ಕಾಲದಲ್ಲಿ ಎಸ್‌ಡಿಪಿಐ ಹಾಗೂ ಪಿಎಫ್‌ಐ ಸಂಘಟನೆಗಳನ್ನು ಪೋಷಿಸಲಾಗುತ್ತಿತ್ತು. ಹಿಂದೂಗಳ ಕೊಲೆ ಪ್ರಕರಣದ ಆರೋಪಿಗಳ ಮೇಲಿನ ಪ್ರಕರಣವನ್ನು ವಾಪಸ್ ಪಡೆಯಲಾಗಿತ್ತು ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.