ADVERTISEMENT

ಬ್ರಹ್ಮಾವರ: ಕೆಡಿಪಿ ಸಭೆ: ಗೈರಾದವರ ಬಗ್ಗೆ ಅಸಮಾಧಾನಗೊಂಡ ಅಧ್ಯಕ್ಷರು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 5:53 IST
Last Updated 4 ಫೆಬ್ರುವರಿ 2023, 5:53 IST
ರಸಪ್ರಶ್ನೆಯಲ್ಲಿ ವಿಜೇತ ವಿದ್ಯಾರ್ಥಿನಿಗೆ ಅದಾನಿಯ ಯುಪಿಸಿಎಲ್ ಬಹುಮಾನ ವಿತರಿಸಲಾಯಿತು
ರಸಪ್ರಶ್ನೆಯಲ್ಲಿ ವಿಜೇತ ವಿದ್ಯಾರ್ಥಿನಿಗೆ ಅದಾನಿಯ ಯುಪಿಸಿಎಲ್ ಬಹುಮಾನ ವಿತರಿಸಲಾಯಿತು   

ಬ್ರಹ್ಮಾವರ: ಕೋಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪಂಚಾಯಿತಿ ಅಧ್ಯಕ್ಷ ಪ್ರಭಾಕರ ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಅಧಿಕಾರಿಗಳ ಗೈರುಹಾಜರಿ ಬಗ್ಗೆ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. ಜನವರಿ 19ರಂದು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಮಟ್ಟದ ಕೆಡಿಪಿ ಸಭೆಗೆ ಗೈರಾಗುವವರ ಬಗ್ಗೆ ನಿರ್ಣಯ ತೆಗೆದುಕೊಂಡು ಮೇಲಧಿಕಾರಿಗೆ ವರದಿ ನೀಡುವಂತೆ ತಿಳಿಸಲಾಗಿದೆ.

ಅದರ ಪ್ರಕಾರ ಗೈರು ಹಾಜರಾದವರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ತಿಳಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಸದಸ್ಯೆ ಗೀತಾ ಖಾರ್ವಿ, ಕೋಡಿ ಕನ್ಯಾನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ ಪರಸಪ್ಪ ದೊಡ್ಡಮನಿ, ಮೆಸ್ಕಾಂ ಕಿರಿಯ ಎಂಜಿನಿಯರ್ ಮಹೇಶ್ ಕೆ, ಕೋಡಿ ಮೀನುಗಾರರ ಸಹಕಾರಿ ಸಂಘ ಸಿಇಓ ಅಕ್ಷಯ ಕುಂದರ್, ಬ್ರಹ್ಮಾವರ ಶಿಶು ಅಭಿವೃದ್ದಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಮೀನಾಕ್ಷಿ, ಕೋಡಿ ಕನ್ಯಾನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಘವೇಂದ್ರ ಕೆ, ಪಂಚಾಯಿತಿ ಕಾರ್ಯದರ್ಶಿ ಉಷಾ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.