ಹೆಬ್ರಿ: ‘ಪ್ರಕೃತಿಯ ಜೊತೆ ನಾವು ಜೀವನ ಮಾಡಿದರೆ, ಅದು ನಮ್ಮನ್ನು ಉಳಿಸುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಗಿಡ–ಮರಗಳ ಅಗತ್ಯವಿದೆ. ನಾವೆಲ್ಲರೂ ಗಿಡ ಮರಗಳನ್ನು ಬೆಳೆಸಿ ಉಳಿಸೋಣ’ ಎಂದು ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ಸಂತೋಷ್ ಭಟ್ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಾರ ವಲಯದ ವತಿಯಿಂದ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯೋಜನೆಯ ಒಕ್ಕೂಟದ ಅಧ್ಯಕ್ಷ ದಾಮೋದರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ರಂಜಿತ್ ಶೆಟ್ಟಿ, ಮಂಜುನಾಥ, ಮೇಲ್ವಿಚಾರಕರಾದ ರೇವತಿ, ಉಮೇಶ್ ಬಿ.ಕೆ, ಸೇವಾ ಪ್ರತಿನಿಧಿ ಲಲಿತಾ, ಸಂಘದ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.