ADVERTISEMENT

ವಿದೇಶಿ ಮಹಿಳೆಯಲ್ಲಿ ಮಂಗನ ಕಾಯಿಲೆ

ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2019, 19:21 IST
Last Updated 2 ಫೆಬ್ರುವರಿ 2019, 19:21 IST

ಉಡುಪಿ: ಫ್ರಾನ್ಸ್‌ನಿಂದ ಪ್ರವಾಸಕ್ಕೆ ಬಂದಿದ್ದ 33 ವರ್ಷದ ವಿದೇಶಿ ಮಹಿಳೆಯೊಬ್ಬರಲ್ಲಿ ಮಂಗನ ಕಾಯಿಲೆಯ ಸೋಂಕು ಕಾಣಿಸಿಕೊಂಡಿದೆ. ಸದ್ಯ ಮಣಿಪಾಲದ ಕೆಎಂಸಿಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯ ಹಲವೆಡೆ ಪ್ರವಾಸ ಮಾಡುವಾಗ ಸೋಂಕು ಹರಡಿದೆ ಎನ್ನಲಾಗಿದೆ. ಕೆಎಂಸಿಯಲ್ಲಿ ಇದುವರೆಗೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ 152 ಮಂದಿ ಶಂಕಿತ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಪೈಕಿ 55 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 89 ಮಂದಿಯಲ್ಲಿ ಕಾಣಿಸಿಕೊಂಡಿಲ್ಲ. ಸದಸ್ಯ 30 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ ಶಿವಮೊಗ್ಗ ಜಿಲ್ಲೆಯ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT