ಉಡುಪಿ: ಬಾಲಕಿನ್ನು ಅಪಹರಿಸಿರುವ ಕುರಿತು ಉಡುಪಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಬೈಲೂರಿನ ಆಶಾಲತಾ ಎಂಬುವವರ ಮಗಳು ದೀಕ್ಷಾ ಅಪಹರಣಕ್ಕೊಳಗಾದ ಬಾಲಕಿ.
ಜುಲೈ 11ರಂದು ಬಾಲಕಿ ನಾಪತ್ತೆಯಾಗಿದ್ದು, ಯಾರೋ ದುರುದ್ದೇಶದಿಂದ ಅಪಹರಣ ಮಾಡಿರುವ ಸಂದೇಹವಿದೆ ಎಂದು ಆಶಾಲತಾ ದೂರಿನಲ್ಲಿ ತಿಳಿಸಿದ್ದಾರೆ.
ಬಾಲಕಿಯನ್ನು ಶಾಲೆಗೆ ಕರೆದೊಯ್ಯುತ್ತಿದ್ದ ರಿಕ್ಷಾ ಚಾಲಕನಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.