ADVERTISEMENT

ಕೆಎಂಸಿಯಲ್ಲಿ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 13:16 IST
Last Updated 6 ಮಾರ್ಚ್ 2023, 13:16 IST
ಕೊಲೊರೆಕ್ಟಲ್ ಕ್ಯಾನ್ಸರ್ (ದೊಡ್ಡ ಕರುಳು ಮತ್ತು ಗುದನಾಳ ಸಂಬಂಧಿತ) ಜಾಗೃತಿ ಮಾಸಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಸೋಮವಾರ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ ಮಾಹಿತಿ ಕೈಪಿಡಿ ಬಿಡುಗಡೆ ಹಾಗೂ ವಿಶೇಷ ರಿಯಾಯಿತಿ ದರದ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು.
ಕೊಲೊರೆಕ್ಟಲ್ ಕ್ಯಾನ್ಸರ್ (ದೊಡ್ಡ ಕರುಳು ಮತ್ತು ಗುದನಾಳ ಸಂಬಂಧಿತ) ಜಾಗೃತಿ ಮಾಸಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಸೋಮವಾರ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ ಮಾಹಿತಿ ಕೈಪಿಡಿ ಬಿಡುಗಡೆ ಹಾಗೂ ವಿಶೇಷ ರಿಯಾಯಿತಿ ದರದ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು.   

ಉಡುಪಿ: ಕೊಲೊರೆಕ್ಟಲ್ ಕ್ಯಾನ್ಸರ್ (ದೊಡ್ಡ ಕರುಳು ಮತ್ತು ಗುದನಾಳ ಸಂಬಂಧಿತ) ಜಾಗೃತಿ ಮಾಸಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಸೋಮವಾರ ಕೊಲೊರೆಕ್ಟಲ್ ಕ್ಯಾನ್ಸರ್ ಜಾಗೃತಿ ಮಾಹಿತಿ ಕೈಪಿಡಿ ಬಿಡುಗಡೆ ಹಾಗೂ ವಿಶೇಷ ರಿಯಾಯಿತಿ ದರದ ಪ್ಯಾಕೇಜ್ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾಸ್ಟ್ರೋ ಎಂಟೆರೊಲೊಜಿ ವಿಭಾಗದ ಮುಖ್ಯಸ್ಥ ಹಾಗೂ ಉಪ ವೈದ್ಯಕೀಯ ಅಧೀಕ್ಷಕರಾದ ಡಾ.ಶಿರನ್ ಶೆಟ್ಟಿ ಮಾತನಾಡಿ, ‘ಕೊಲೊರೆಕ್ಟಲ್ ಕ್ಯಾನ್ಸರ್ ಕೋಲನ್ ಅಥವಾ ಗುದನಾಳದಲ್ಲಿ ಕಾಣಿಸಿಕೊಳ್ಳುತ್ತದೆ. ಜೀವಕೋಶಗಳು ಅಸಹಜವಾಗಿ ಮತ್ತು ನಿಯಂತ್ರಣವಿಲ್ಲದೆ ವಿಭಜಿಸಿ ಗಡ್ಡೆಯಾಗಿ ಬದಲಾಗಿ ಕೊಲೊರೆಕ್ಟರ್ ಕ್ಯಾನ್ಸರ್ ಬರುತ್ತದೆ.

ಭಾರತದಲ್ಲಿ ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ಕರುಳಿನ ಕ್ಯಾನ್ಸರ್ ಮತ್ತು ಗುದನಾಳದ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕೊಲೊರೆಕ್ಟಲ್ ಕ್ಯಾನ್ಸರ್ ಮಾರಣಾಂತಿಕವಾಗಿದ್ದು, ಮಾರಕ ಕ್ಯಾನ್ಸರ್‌ಗಳಲ್ಲಿ ಎರಡನೇ ಸ್ಥಾನದಲ್ಲಿದೆ ಎಂದರು.

ADVERTISEMENT

ಕೊಲೊರೆಕ್ಟಲ್ ಕ್ಯಾನ್ಸರ್ ಕೊಲೊನೋಸ್ಕೋಪಿ ಮೂಲಕ ಪತ್ತೆ ಹಚ್ಚಬಹುದು. ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಮಾರ್ಚ್ 31ರವರೆಗೆ ವಿಶೇಷ ರಿಯಾಯಿತಿ ದರದಲ್ಲಿ ₹ 4,999 ಕೊಲೊನೋಸ್ಕೋಪಿ ಪರೀಕ್ಷೆ ಮಾಡಲಾಗುವುದು. ಇದರ ಜತೆಗೆ ರಕ್ತ ಪರೀಕ್ಷೆಯನ್ನು ನಡೆಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬಹುದು ಎಂದರು.

ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ.ಆನಂದ್ ವೇಣುಗೋಪಾಲ್ ಕ್ಯಾನ್ಸರ್ ಜಾಗೃತಿ ಮಾಹಿತಿ ಕೈಪಿಡಿ ಬಿಡುಗಡೆ ಮಾಡಿದರು. ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ, ಕಾರ್ಕಳ ಡಾ.ಟಿಎಂಎ ಪೈ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ, ಮಾರ್ಕೆಟಿಂಗ್ ಮುಖ್ಯಸ್ಥ ಸಚಿನ್ ಕಾರಂತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.