ADVERTISEMENT

ಕೆಎಂಸಿ, ಡಾ.ಟಿಎಂಎ ಪೈನಲ್ಲಿ ಕೋವಿಡ್ ಲಸಿಕೆ ಲಭ್ಯ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 16:27 IST
Last Updated 23 ಜೂನ್ 2021, 16:27 IST

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆ, ಉಡುಪಿಯ ಡಾ.ಟಿ.ಎಂಎ ಪೈ ಆಸ್ಪತ್ರೆ, ಹಾಗೂ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಕೋವಿಡ್ ಲಸಿಕೆಯು ಲಭ್ಯವಿದೆ ಎಂದು ಆಸ್ಪತ್ರೆಗಳ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.

ಮೊದಲ ಡೋಸ್ ಪಡೆದು 84 ದಿನ ಕಳೆದವರಿಗೆ ಎರಡನೇ ಡೋಸ್ ಕೋವಿಶೀಲ್ಡ್ ಲಸಿಕೆ ಲಭ್ಯವಿದೆ. ಸರ್ಕಾರ ನಿಗದಿಪಡಿಸಿದ ದರದಲ್ಲಿ ಲಸಿಕೆ ನೀಡಲಾಗುತ್ತಿದ್ದು, ಸಾರ್ಜವನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಲಸಿಕೆ ಅವಶ್ಯವಿದ್ದವರು ಕೋವಿನ್ ಆ್ಯಪ್‌ನಲ್ಲಿ ನೋಂದಣಿ ಮಾಡಿಸಬೇಕು. ನೇರವಾಗಿ ಆಧಾರ್ ಕಾರ್ಡ್‌ನೊಂದಿಗೆ ಮರೇನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗೆ ಬರಬಹುದು. ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಕೌಂಟರ್ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ ಕಸ್ತೂರ್ಬಾ ಆಸ್ಪತೆ ಮಣಿಪಾಲ: 0820 2922761, ಡಾ.ಟಿಎಂಎ ಪೈ ಆಸ್ಪತೆ, ಉಡುಪಿ :08202942126, ಡಾ.ಟಿಎಂಎ ರೋಟರಿ ಪೈ ಆಸ್ಪತೆ, ಕಾರ್ಕಳ: 08258230583 ಸಂಪರ್ಕಿಸಬಹುದು. ಸಾರ್ವಜನಿಕರು ಇರುವ ಸ್ಥಳಕ್ಕೆ ಬಂದು ಲಸಿಕೆ ಹಾಕುವ ವ್ಯವಸ್ಥೆಯೂ ಇದೆ. ಮಾಹಿತಿಗೆ 7338625909 ಕರೆ ಮಾಡಬಹುದು ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.