ADVERTISEMENT

ಕೆಎಂಸಿಯಲ್ಲಿ ಶನಿವಾರ ಮಧ್ಯಾಹ್ನದವರೆಗೆ ಮಾತ್ರ ಒಪಿಡಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 12:39 IST
Last Updated 22 ಏಪ್ರಿಲ್ 2021, 12:39 IST

ಉಡುಪಿ: ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಶನಿವಾರ ಹೊರ ರೋಗಿ ವಿಭಾಗಗಳ ಸೇವೆಗಳು ಮಧ್ಯಾಹ್ನದವರೆಗೆ ಮಾತ್ರ ಲಭ್ಯವಿರುತ್ತವೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್‌ ಶೆಟ್ಟಿ ತಿಳಿಸಿದ್ದಾರೆ.

ಏ.24ರಿಂದ ಆಸ್ಪತ್ರೆಯ ಒಪಿಡಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ತೆರೆದಿರುತ್ತದೆ. ಸರ್ಕಾರದ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿ ಇರುವವರೆಗೆ ಆದೇಶ ಮುಂದುವರಿಯುತ್ತದೆ. ತುರ್ತು ಸೇವೆಗಳು ಎಂದಿನಂತೆ ದಿನದ 24 ಗಂಟೆಗಳ ಕಾಲ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT