ಕೋಡಿ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಮೂರು ತಿಂಗಳ ಹಸಿರುಜೀವ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು.
ಕೋಟ (ಬ್ರಹ್ಮಾವರ): ಕರಾವಳಿ ಭಾಗದಲ್ಲಿ ಗೀತಾನಂದ ಫೌಂಡೇಷನ್ ಹಸಿರು ಕ್ರಾಂತಿಯನ್ನು ಪಸರಿಸಿ ಪರಿಸರ ಜಾಗೃತಿ ಮೂಡಿಸಿದೆ ಎಂದು ಉದ್ಯಮಿ ಆನಂದ ಸಿ. ಕುಂದರ್ ಹೇಳಿದರು.
ಕೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸಬೆಂಗ್ರೆ ಅಂಗನವಾಡಿ, ಸ್ತ್ರೀ ಶಕ್ತಿ ಸಂಜೀವಿನಿ ಒಕ್ಕೂಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಡಿ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ನಡೆದ 3 ತಿಂಗಳ ಹಸಿರು ಜೀವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಗೀತಾನಂದ ಫೌಂಡೇಷನ್ ಸಮಾಜದ ದುರ್ಬಲರಿಗೆ ಸಹಾಯ ಮಾಡುತ್ತಿದ್ದು, ಪರಿಸರದ ಸಂರಕ್ಷಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇವರೊಂದಿಗೆ ಪಂಚವರ್ಣ ಸಂಸ್ಥೆ ಪರಿಸರದ ಬಗ್ಗೆ ಹೊಸ ಅಧ್ಯಾಯ ಸೃಷ್ಟಿಸಿದೆ. ಇದು ಮಾದರಿ ಕಾರ್ಯಕ್ರಮವಾಗಿ ರಾಷ್ಟ್ರಮಟ್ಟದಲ್ಲಿ ಪ್ರಚಲಿತಗೊಳ್ಳುತ್ತಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಹಸಿರು ಜೀವ ಯೋಜನೆ ಯಶಸ್ವಿ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದರು.
ಗ್ರಾಮ ಪಂಚಾಯಿತಿ, ವಿವಿಧ ಸಂಘಟನೆಗಳಿಂದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಅವರನ್ನು ಗೌರವಿಸಲಾಯಿತು. ಕೋಡಿ ಗ್ರಾ.ಪಂ. ಅಧ್ಯಕ್ಷೆ ಗೀತಾ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ಪ್ರಭಾಕರ ಮೆಂಡನ್, ಸದಸ್ಯ ಕೃಷ್ಣ ಪೂಜಾರಿ ಪಿ, ಅಂಗನವಾಡಿ ಮೇಲ್ವಿಚಾರಕಿ ಸವಿತಾ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೀಪಾ ಖಾರ್ವಿ ಇದ್ದರು. ಪಿಡಿಒ ರವೀಂದ್ರ ರಾವ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕಿ ಯಮುನಾ ಎಲ್. ಕುಂದರ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.