ADVERTISEMENT

ಕೊಕ್ಕರ್ಣೆ ನಾರಾಯಣಗುರು ಬಿಲ್ಲವರ ಸಂಘ ರಜತ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 6:05 IST
Last Updated 19 ನವೆಂಬರ್ 2025, 6:05 IST
ಕೊಕ್ಕರ್ಣೆ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವರ ಸಂಘದ ರಜತ ಮಹೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು
ಕೊಕ್ಕರ್ಣೆ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವರ ಸಂಘದ ರಜತ ಮಹೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು   

ಬ್ರಹ್ಮಾವರ: ಕೊಕ್ಕರ್ಣೆಯ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವರ ಸೇವಾ ಸಂಘದ ರಜತ ಮಹೋತ್ಸವದ ಪ್ರಯುಕ್ತ ಡಿ. 27 ಮತ್ತು 28ರಂದು ನಡೆಯುವ ರಜತ ಮಹೋತ್ಸವ ಸಂಭ್ರಮದ ‘ಆಮಂತ್ರಣ ಪತ್ರಿಕೆ ಬಿಡುಗಡೆ’ ಕಾರ್ಯಕ್ರಮ ಭಾನುವಾರ ನಡೆಯಿತು.

ಕೊಕ್ಕರ್ಣೆ ಬಿಲ್ಲವರ ಸೇವಾ ಸಂಘದ ಅಧ್ಯಕ್ಷೆ ಬೇಬಿ ಎಸ್.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಕೆ.ಸಂಜೀವ ಮಾಸ್ಟರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಕಾರ್ಯಾಧ್ಯಕ್ಷ ಭಾಸ್ಕರ ಪೂಜಾರಿ, ಉಪಾಧ್ಯಕ್ಷ ಅನಂತರಾಮ ಪೂಜಾರಿ, ಗೌರವ ಸಲಹೆಗಾರ ಗಣಪ ಪೂಜಾರಿ, ಕಾರ್ಯದರ್ಶಿ ರವಿ ಪೂಜಾರಿ, ಕೋಶಾಧಿಕಾರಿ ಸುರೇಶ್ಚಂದ್ರ ಬಾಬು, ಮಹಿಳಾ ವೇದಿಕೆಯ ಅಧ್ಯಕ್ಷೆ ಶೀಲಾ, ಕೊಕ್ಕರ್ಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತ್ ಪೂಜಾರಿ, ಆವರ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಪೂಜಾರಿ, ಸಂಘದ ಜತೆ ಕಾರ್ಯದರ್ಶಿ ಹರಿಣಿ ಶ್ರೀಧರ, ಪ್ರಜ್ವಲ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.