ADVERTISEMENT

ವೇತನ ಪಾವತಿಗೆ ₹ 3.68 ಕೋಟಿ ಬಿಡುಗಡೆ

ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ಸರ್ಕಾರಿ ತಾಯಿ, ಮಕ್ಕಳ ಆಸ್ಪತ್ರೆಗೆ ನೆರವು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2022, 12:33 IST
Last Updated 6 ಅಕ್ಟೋಬರ್ 2022, 12:33 IST

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಸರ್ಕಾರ ₹ 36.8 ಕೋಟಿ ನೀಡಲು ಒಪ್ಪಿಗೆ ನೀಡಿದೆ. ಬಾಕಿ ವೇತನ ಪಾವತಿಗೆ ₹ 2.28 ಕೋಟಿ ಹಾಗೂ ಇತರ ಬಾಕಿ ಪಾವತಿಗೆ ₹ 1.40 ಕೋಟಿ ಬಿಡುಗಡೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಯುತ್ತಿದ್ದ ಆಸ್ಪತ್ರೆಯನ್ನು ಸರ್ಕಾರ ಈಚೆಗೆ ವಶಕ್ಕೆ ಪಡೆದುಕೊಂಡಿತ್ತು. ಸರ್ಕಾರದ ಸುಪರ್ದಿಗೆ ಆಸ್ಪತ್ರೆ ಬರುವ ಮೊದಲು ಕಾರ್ಯನಿರ್ವಹಿಸಿದ್ದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಾಕಿ ವೇತನ, ಭತ್ಯೆ ಹಾಗೂ ಇತರ ವೆಚ್ಚಗಳನ್ನು ಭರಿಸಲು ₹ 3,68,71,724 ಅಗತ್ಯವಿದ್ದು ಮಂಜೂರು ಮಾಡುವಂತೆ ಜೂನ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶಾಸಕ ಕೆ.ರಘುಪತಿ ಭಟ್ ಪ್ರಸ್ತಾವ ಸಲ್ಲಿಸಿದ್ದರು.

ಅದರಂತೆ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆಯ ಒಪ್ಪಿಗೆ ದೊರೆತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ₹ 36.8 ಕೋಟಿ ಭರಿಸಲು ಅನುಮತಿ ನೀಡಿದೆ. ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.