ADVERTISEMENT

ಬ್ರಹ್ಮಾವರ: ಗೀತಾನಂದ ಫೌಂಡೇಷನ್ ಆನಂದೋತ್ಸವ

₹25 ಲಕ್ಷ ಮೌಲ್ಯದ ಶೈಕ್ಷಣಿಕ, ಸಾಮಾಜಿಕ ಕೊಡುಗೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:39 IST
Last Updated 31 ಮೇ 2025, 14:39 IST
ಆನಂದೋತ್ಸವ ಕಾರ್ಯಕ್ರವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮುಖ್ಯಸ್ಥ ಶಂಕರ್ ಉದ್ಘಾಟಿಸಿದರು
ಆನಂದೋತ್ಸವ ಕಾರ್ಯಕ್ರವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮುಖ್ಯಸ್ಥ ಶಂಕರ್ ಉದ್ಘಾಟಿಸಿದರು   

ಕೋಟ (ಬ್ರಹ್ಮಾವರ): ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಅಲ್ಲಿ ಕಲಿತ ವಿದ್ಯಾರ್ಥಿಗಳು ಸಾಧನೆ ಮಾಡಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಿ ಎಂದು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮುಖ್ಯಸ್ಥ ಜಿ. ಶಂಕರ್ ಹೇಳಿದರು.

ಕೋಟ ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಕೆ.ಸಿ.ಕುಂದರ್ ಸಭಾಭವನದಲ್ಲಿ ಕೋಟ ಮಣೂರಿನ ಗೀತಾನಂದ ಫೌಂಡೇಷನ್ ವತಿಯಿಂದ ನಡೆದ ಆನಂದೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಉತ್ತಮ ಸಾಧನೆ ಮಾಡುತ್ತಿವೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸುವುದು ಸುಲಭದ ಮಾತಲ್ಲ. ಈ ದಿಸೆಯಲ್ಲಿ ಗೀತಾನಂದ ಫೌಂಡೇಶನ್ ಸಾಮಾಜಿಕ ಕಾರ್ಯ ಶ್ಲಾಘನೀಯ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ಗೀತಾನಂದ ಫೌಂಡೇಷನ್ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಕಳೆದ ವರ್ಷ ₹1.60 ಕೋಟಿ ವಿನಿಯೋಗಿಸಿದೆ. ಮುಂದಿನ ದಿನಗಳಲ್ಲಿಯೂ ಸಾಮಾಜಿಕ ಬದ್ಧತೆಯನ್ನು ಕಾಯ್ದುಕೊಳ್ಳಲಿದೆ ಎಂದರು.

ಮುಖಂಡಕೆ. ಜಯಪ್ರಕಾಶ ಹೆಗ್ಡೆ ಅವರು ಶಾಲಾ ಪಠ್ಯದಲ್ಲಿ ಪ್ಲಾಸ್ಟಿಕ್‌, ಕಸ, ಪರಿಸರ ಜಾಗೃತಿ ವಿಚಾರವನ್ನು ಅಳವಡಿಸಲು ಸಲಹೆ ನೀಡಿದರು. ಗೀತಾನಂದ ಫೌಂಡೇಷನ್ ವತಿಯಿಂದ ನಿರ್ಮಾಣಗೊಂಡ ಶಾಲಾ ಹೊಸ ಕಟ್ಟಡವನ್ನು ಲೋಕಾರ್ಪಣೆಗೊಳಿಸಲಾಯಿತು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ, ಉದ್ಯಮಿ ಮಲ್ಪೆ ಆನಂದ ಸುವರ್ಣ, ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಸತೀಶ ಕುಂದರ್, ಕೋಟ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ, ಪಡುಕರೆ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡೆನಿಸ್ ಬಾಂಜಿ, ಸಂಯುಕ್ತ ಪ್ರೌಢಶಾಲಾ ಮುಖ್ಯಶಿಕ್ಷಕ ವಿವೇಕಾನಂದ ಗಾಂವ್ಕರ್‌, ಮನೋವೈದ್ಯ ಡಾ.ಪ್ರಕಾಶ ಸಿ. ತೋಳಾರ್, ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ ಎಚ್‌. ಕುಂದರ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಮಂಜುನಾಥ ಹೊಳ್ಳ, ಗೀತಾನಂದ ಟ್ರಸ್ಟ್‌ ನಿರ್ದೇಶಕಿ ದಿವ್ಯಲಕ್ಷ್ಮೀ ಪ್ರಶಾಂತ ಕುಂದರ್, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೆ. ಕೃಷ್ಣ ಕಾಂಚನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ, ಕೋಟ ಘಟಕದ ಅಧ್ಯಕ್ಷ ರಂಜಿತ್ ಕುಮಾರ್, ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಭಾಗವಹಿಸಿದ್ದರು.

ಜನತಾ ಸಂಸ್ಥೆಯ ಸಿಬ್ಬಂದಿ ಮಮತಾ ಗುಳ್ಳಾಡಿ ನಿರೂಪಿಸಿದರು. ಜನತಾ ಸಂಸ್ಥೆಯ ಮ್ಯಾನೇಜರ್ ಶ್ರೀನಿವಾಸ ಕುಂದರ್ ಸ್ವಾಗತಿಸಿದರು. ಗೀತಾನಂದ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ ವಂದಿಸಿದರು.

₹25 ಲಕ್ಷದ ಕೊಡುಗೆ

ಸ್ಥಳೀಯ 48 ಶಾಲೆಗಳ 6 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಬುಕ್‌ ಹಸ್ತಾಂತರ ಸಮವಸ್ತ್ರ ವಿತರಣೆ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಂಯುಕ್ತ ಪ್ರೌಢಶಾಲೆಯ ಪ್ರಾಥಮಿಕ ವಿಭಾಗಕ್ಕೆ ಸ್ಯಾನಿಟರಿ ನ್ಯಾಪ್‌ಕಿನ್ ಬರ್ನರ್ ಹಸ್ತಾಂತರ ವಿವಿಧ ಸಂಘ ಸಂಸ್ಥೆಗಳಿಗೆ ಸಸಿ ವಿತರಣೆ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ಪರಿಕರ ಹಸ್ತಾಂತರ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಪಿ.ಯು ಕಾಲೇಜು ನಿರ್ವಹಣೆಗೆ ₹5 ಲಕ್ಷ ಮಿಕ್ಕಿ ದೇಣಿಗೆ ಸಹಿತ ವಿದ್ಯಾರ್ಥಿಗಳಿಗೆ ಸಮವಸ್ತ್ರ ಗ್ರಾಮದ ಅಶಕ್ತ ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು ಬಡವರಿಗೆ ಸೂರು ಭಾಗ್ಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ನಗದು ಸಹಿತ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪವರ್ ಲಿಫ್ಟಿಂಗ್‌ನಲ್ಲಿ ಸಾಧನೆಗೈದ ಶಿಕ್ಷಕಿ ನಾಗರತ್ನ ಇಲಾಖೆಯಿಂದ ನಿವೃತ್ತರಾಗಲಿರುವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ. ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.