ಉಡುಪಿ: ವಾರದ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಭೆಯಲ್ಲಿ ಭಾಗವಹಿಸಿದ್ದರಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ವಯಂ ಹೋಂ ಕ್ವಾರಂಟೈನ್‌ಗೊಳಗಾಗಿದ್ದಾರೆ.
ಕೋಟದ ನಿವಾಸದಲ್ಲಿ ಸಚಿವರು ಪ್ರತ್ಯೇಕವಾಗಿದ್ದು, ಸೋಂಕಿನ ಯಾವ ಲಕ್ಷಣಗಳು ಇಲ್ಲ. ಕೋವಿಡ್ ಮಾರ್ಗಸೂಚಿಯಂತೆ ಹೋಂ ಕ್ವಾರಂಟೈನ್‌ಗೊಳಗಾಗಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರ ಭೇಟಿ ರದ್ದಾಗಿದೆ ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.