ADVERTISEMENT

ಸರ್ಕಾರ ಆಡಳಿತ ನಡೆಸುವ ಸ್ಥಿತಿಯಲ್ಲಿಲ್ಲ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 14:15 IST
Last Updated 21 ಜೂನ್ 2019, 14:15 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಉಡುಪಿ: ಮೈತ್ರಿ ಸರ್ಕಾರ ಆಡಳಿತ ನಡೆಸುವ ಸ್ಥಿತಿಯಲ್ಲಿ ಇಲ್ಲ ಎಂಬ ವಿಚಾರ ದೇವೇಗೌಡರ ಹೇಳಿಕೆಯಿಂದ ಸಾಬೀತಾಗಿದೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,ರಾಜ್ಯದ ಬೆಳವಣಿಗೆಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷರಾದ ಯಡಿಯೂರಪ್ಪ ಹಾಗೂ ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕೋಟ ಹೇಳಿದರು.

ಶಾಸಕರು ಐದು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ. ಚುನಾವಣೆ ನಡೆದು ಕೇಲವ ಒಂದು ವರ್ಷವಷ್ಟೇ ಆಗಿದೆ. ಈಗ ಚುನಾವಣೆ ಅಗತ್ಯವಿಲ್ಲ.ಚುನಾವಣೆಗೆ ಹೋಗುವ ಮನಸ್ಥಿತಿಯಲ್ಲಿ ಶಾಸಕರು ಇಲ್ಲ.ಆದರೆ ದೇವೇಗೌಡರ ಮನಸ್ಥಿತಿ ಏನಿದೆ ಗೊತ್ತಾಗುತ್ತಿಲ್ಲ. ರಾಜ್ಯದ ಜನರು ಕೂಡಸರ್ಕಾರ ಉರುಳುವುದನ್ನು ಕಾಯುತ್ತಿದ್ದಾರೆ ಎಂದರು.

ADVERTISEMENT

ಮುಖ್ಯಮಂತ್ರಿ ಕುಮಾರಸ್ವಾಮಿ ಪಂಚತಾರಾ ಹೋಟೆಲ್‌ನಿಂದ ನೇರವಾಗಿ ಗ್ರಾಮ ವಾಸ್ತವ್ಯಕ್ಕೆ ತೆರಳಿದ್ದಾರೆ. ರಾಜ್ಯ ಸರ್ಕಾರ ಶವವಾಗಿದ್ದು, ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.ಬರ, ನೆರೆಯ ನಿರ್ವಹಣೆ ಬೇಡವಾಗಿದೆ. ಸರ್ಕಾರದ ಲೋಪಗಳನ್ನು ಮರೆಮಾಚಲು ಮುಖ್ಯಮಂತ್ರಿ ಗ್ರಾಮವಾಸ್ತವ್ಯದ ಮೊರೆ ಹೋಗಿದ್ದಾರೆ ಎಂದು ಟೀಕಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.