ಉಡುಪಿ: ಸಚಿವ ಸಂಪುಟದಲ್ಲಿ ಯಾರು ಇರಬೇಕು, ಯಾರು ಇರಬಾರದು ಎಂಬ ತೀರ್ಮಾನವನ್ನು ಕೈಕಮಾಂಡ್ ತೆಗೆದುಕೊಳ್ಳಲಿದ್ದು, ನಿರ್ಧಾರಕ್ಕೆ ಬದ್ಧವಿರುವುದಾಗಿ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಾರ್ಕಳದಲ್ಲಿಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಸ್ಥಾನಕ್ಕೆ ಚ್ಯುತಿ ಇಲ್ಲ ಎಂಬುದನ್ನು ಹೇಳಬಲ್ಲೆ. ಸಂಪುಟ ಪುನಾರಚನೆ ಬಗ್ಗೆ ಎರಡ್ಮೂರು ದಿನಗಳಲ್ಲಿ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವರಿಷ್ಠರ ಬಳಿ ಚರ್ಚಿಸಲಿದ್ದಾರೆ ಎಂದು ಕೋಟ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.