ADVERTISEMENT

‘ಚಿಕ್ಕ ಚಿಕ್ಕ ಕನಸುಗಳಿಂದ ಯಶಸ್ಸು’

ಕೋಟ ವಿವೇಕ ವಿದ್ಯಾಸಂಸ್ಥೆಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 6:06 IST
Last Updated 24 ಜುಲೈ 2025, 6:06 IST
ಕೋಟ ವಿವೇಕ ವಿದ್ಯಾಸಂಸ್ಥೆಯ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಾಗೂ ವಿವೇಕ ಬಾಲಕಿಯರ ಪ್ರೌಢಶಾಲೆಯ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ಕೃಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಗೌರವಿಸಲಾಯಿತು.
ಕೋಟ ವಿವೇಕ ವಿದ್ಯಾಸಂಸ್ಥೆಯ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಾಗೂ ವಿವೇಕ ಬಾಲಕಿಯರ ಪ್ರೌಢಶಾಲೆಯ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ಕೃಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದವರನ್ನು ಗೌರವಿಸಲಾಯಿತು.   

ಕೋಟ (ಬ್ರಹ್ಮಾವರ): ‘ಬದುಕಿನ ಸಾರ್ಥಕತೆಯಲ್ಲಿ ಪ್ರಯತ್ನ, ಅವಿರತ ಛಲ, ಧನಾತ್ಮಕ ಹಠ ನಮ್ಮನ್ನು ಗೆಲುವಿನೆಡೆಗೆ ಕೊಂಡೊಯ್ಯಬಲ್ಲದು’ ಎಂದು ಡಾ.ವಿಷ್ಣುಮೂರ್ತಿ ಐತಾಳ ಹೇಳಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಇಲ್ಲಿನ ವಿವೇಕ ವಿದ್ಯಾಸಂಸ್ಥೆಯ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ, ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಾಧನೆ ಮಾಡಲು ಮೊದಲು ಕನಸು ಕಾಣಬೇಕು. ನಮ್ಮನ್ನು ನಿದ್ರೆ ಬಾರದಂತೆ ಮಾಡುವುದು ಕನಸಿನ ನೈಜ ಅರ್ಥ. ಚಿಕ್ಕ ಚಿಕ್ಕ ಕನಸುಗಳ ಮೂಲಕ ಅದರ ಗುರಿಸಾಧನೆ ಮಾಡಬೇಕು. ವಿದ್ಯಾರ್ಥಿಗಳ ಪ್ರತಿಭೆ ಅರಳಿಸುವಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪ್ರೇರಣೆ ನೀಡುತ್ತದೆ. ಕೋಟ ವಿದ್ಯಾಸಂಘದ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ADVERTISEMENT

ಕೋಟ ವಿದ್ಯಾಸಂಘದ ಅಧ್ಯಕ್ಷ ಪಿ. ಪ್ರಭಾಕರ ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎಂ. ರಾಮದೇವ ಐತಾಳ, ಜತೆ ಕಾರ್ಯದರ್ಶಿ ಮಂಜುನಾಥ ಉಪಾಧ್ಯ, ವಿವೇಕ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚೆಂಪಿ ರಮಾನಂದ ಭಟ್, ವಿವೇಕ ಬಾಲಕರ ಪ್ರೌಡಶಾಲಾ ವಿಭಾಗದ ಮುಖ್ಯಸ್ಥ ಪ್ರೇಮಾನಂದ, ವಿವೇಕ ಇಂಗ್ಲಿಷ್‌ ಮಾಧ್ಯಮ ಪ್ರೌಢಶಾಲೆ ಮುಖ್ಯಸ್ಥೆ ಪ್ರೀತಿ ರೇಖಾ, ಬಾಲಕಿಯರ ಪ್ರೌಢಶಾಲೆ ಮುಖ್ಯಸ್ಥ ವೆಂಕಟೇಶ ಉಡುಪ ಭಾಗವಹಿಸಿದ್ದರು. 

ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಗದೀಶ ನಾವುಡ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಗಣೇಶ ಶೆಟ್ಟಿ ವಂದಿಸಿದರು. ಶಿಕ್ಷಕ ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.