
ಪ್ರಜಾವಾಣಿ ವಾರ್ತೆ
ಸಂತೋಷ್ ಮೊಗವೀರ
ಬ್ರಹ್ಮಾವರ(ಉಡುಪಿ): ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಒಬ್ಬ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕಿನ ಕೋಟತಟ್ಟು ಪಡುಕರೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಪಡುಕರೆಯ ಸಂತೋಷ್ ಮೊಗವೀರ (30) ಮೃತಪಟ್ಟವರು.
ಯುವಕರು ಭಾನುವಾರ ರಾತ್ರಿ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ತೀವ್ರ ಗಾಯಗೊಂಡ ಸಂತೋಷ ಮೊಗವೀರ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ನಾಲ್ವರು ಯುವಕರನ್ನು ಕೋಟ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.