ADVERTISEMENT

ಕೋಟಿಲಿಂಗೇಶ್ವರ ಮಹಾತ್ಮೆ ಜಗದಗಲ ಬೆಳಗಲಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2023, 13:03 IST
Last Updated 26 ನವೆಂಬರ್ 2023, 13:03 IST
ಕುಂದಾಪುರ ಸಮೀಪದ ಕೋಟೇಶ್ವರ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಶ್ರೀ ಶಾಂತಾರಾಮ ರಂಗಮಂಟಪದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ತಂತ್ರಿ ಪ್ರಸನ್ನಕುಮಾರ ಐತಾಳ್ , ರಾಗಿಣಿ ದೇವಾಡಿಗ ಇದ್ದರು.
ಕುಂದಾಪುರ ಸಮೀಪದ ಕೋಟೇಶ್ವರ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಶ್ರೀ ಶಾಂತಾರಾಮ ರಂಗಮಂಟಪದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಉದ್ಘಾಟಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ತಂತ್ರಿ ಪ್ರಸನ್ನಕುಮಾರ ಐತಾಳ್ , ರಾಗಿಣಿ ದೇವಾಡಿಗ ಇದ್ದರು.   

ಕುಂದಾಪುರ: ಇತಿಹಾಸ ಪ್ರಸಿದ್ಧ ಕೋಟಿಲಿಂಗೇಶ್ವರ ದೇವರ ಮಹಿಮೆ, ವಿಶೇಷತೆ ಸಾರುವ ಉದ್ದೇಶದಿಂದ ರಚಿಸಲಾದ ಕೋಟಿಲಿಂಗೇಶ್ವರ ಮಹಾತ್ಮೆ ಯಕ್ಷಗಾನ ಪ್ರಸಂಗ ಲೋಕದಾದ್ಯಂತ ಯಶಸ್ವಿ ಪ್ರದರ್ಶನಗೊಳ‌್ಳಲಿ ಎಂದು ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾರೈಸಿದರು.

ಕೋಟೇಶ್ವರ ಮಹತೋಭಾರ ಕೋಟಿಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಪ್ರಯುಕ್ತ ದೇವಳದ ಶಾಂತಾರಾಮ ರಂಗಮಂಟಪದಲ್ಲಿ ನಡೆದ ಧಾರ್ಮಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಶ್ರದ್ಧಾ ಭಕ್ತಿ ಕೇಂದ್ರವಾದ ಕೋಟಿಲಿಂಗೇಶ್ವರ ಕ್ಷೇತ್ರದ ಸೇವೆ ಮಾಡಿಕೊಂಡು ಬಂದಿದ್ದೇನೆ. ಈ ನೆಲೆಯಲ್ಲಿ ದೇವಳ ಅಭಿವೃದ್ಧಿ ಪ್ರತಿ ಹಂತದಲ್ಲಿಯೂ ಆಡಳಿತ ಮಂಡಳಿ, ಭಕ್ತರೊಂದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

ADVERTISEMENT

ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಕ್ವಾಡಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ತಂತ್ರಿ ಪ್ರಸನ್ನ ಕುಮಾರ್ ಐತಾಳ್ ಶ್ರೀ ಕೋಟಿಲಿಂಗೇಶ್ವರ ಮಹಾತ್ಮೆ ಯಕ್ಷಗಾನ ಪ್ರಸಂಗ ಬಿಡುಗಡೆ ಮಾಡಿ, ಶುಭ ಹಾರೈಸಿದರು. ಯಕ್ಷಗಾನ ಪ್ರಸಂಗಕರ್ತ ಕೆ.ಎಸ್. ಮಂಜುನಾಥ್ ಅವರನ್ನು ಗೌರವಿಸಲಾಯಿತು. ಮಾಧವ ಅಡಿಗ ಧಾರ್ಮಿಕ ಸಂದೇಶ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಗಿಣಿ ದೇವಾಡಿಗ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರಾದ ಶಾರದಾ ಮೂಡುಗೋಪಾಡಿ, ಮಂಜುನಾಥ್ ಆಚಾರ್ಯ ಅರಸರಬೆಟ್ಟು ಇದ್ದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಿಕಾ ಧನ್ಯ ಸ್ವಾಗತಿಸಿದರು. ಸುರೇಶ್ ಶೇರೆಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತಿ ಮೂಡುಗೋಪಾಡಿ ವಂದಿಸಿದರು. ಕಡ್ಲೆ ಗಣಪತಿ ಹೆಗ್ಡೆ ನಿರ್ದೇಶನದಲ್ಲಿ ಕೋಟಿಲಿಂಗೇಶ್ವರ ಕಲಾ ಬಳಗ ಮಕ್ಕಳ ತಂಡದಿಂದ ಕೋಟಿಲಿಂಗೇಶ್ವರ ಮಹಾತ್ಮೆ ಯಕ್ಷಗಾನ ಪ್ರಸಂಗ ಪ್ರದರ್ಶನ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.