ADVERTISEMENT

21 ಶಂಕಿತ ಸೋಂಕಿತರು ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 15:26 IST
Last Updated 27 ಮಾರ್ಚ್ 2020, 15:26 IST

ಉಡುಪಿ: ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ 21 ಮಂದಿ ಶುಕ್ರವಾರ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈಚೆಗೆ ವಿದೇಶಗಳಿಂದ ಉಡುಪಿಗೆ ಬಂದಿದ್ದ 16 ಜನ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಐವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಇವರೆಲ್ಲರಿಗೂ ಐಸೊಲೇಟೆಡ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದರು.

ಶುಕ್ರವಾರ 12 ವರದಿಗಳು ಬಂದಿದ್ದು, ಎಲ್ಲವೂ ನೆಗೆಟಿವ್‌ ಆಗಿದೆ. 32 ವರದಿಗಳು ಬರಬೇಕಿದೆ. ಜಿಲ್ಲೆಯಲ್ಲಿ ಒಬ್ಬರಲ್ಲಿ ಮಾತ್ರ ಕೋವಿಡ್‌ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

99 ಹೋಂ ಕ್ವಾರಂಟೈನ್‌:

ಶುಕ್ರವಾರ ಹೊಸದಾಗಿ 99 ಜನರನ್ನು ಹೋಂ ಕ್ವಾರಂಟೈನ್‌ನಲ್ಲಿಡಲಾಗಿದ್ದು, ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದೆ. 128 ಜನ 28 ದಿನಗಳ ಗೃಹ ನಿಗಾ ಅವಧಿ ಪೂರೈಸಿದ್ದಾರೆ.1,429 ಜನರನ್ನು ತಪಾಸಣೆಗೊಳಪಡಿಸಲಾಗಿದೆ ಎಂದು ಡಿಎಚ್‌ಒ ಮಾಹಿತಿ ನೀಡಿದರು.

ಮತ್ತೊಂದೆಡೆ, ಕೋವಿಡ್‌–19 ಸೋಂಕಿತನ ಜತೆ ನೇರ ಹಾಗೂ ಪರೋಕ್ಷ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಹೋಂ ಕ್ವಾರಂಟೈನ್‌ನಲ್ಲಿ ಇಡುವ ಕೆಲಸ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.