ADVERTISEMENT

19ಕ್ಕೆ ಕಚೇರಿಗೆ ಬಂದಿದ್ದ ಸೋಂಕಿತ

ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ಮಾಹಿತಿ

​ಪ್ರಜಾವಾಣಿ ವಾರ್ತೆ
Published 26 ಮೇ 2020, 1:22 IST
Last Updated 26 ಮೇ 2020, 1:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಕೋವಿಡ್‌ ಸೋಂಕು ತಗುಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯ ಸಿಬ್ಬಂದಿ ಕೊನೆಯದಾಗಿ ಮೇ 19ರ ಬೆಳಿಗ್ಗೆ ಕಚೇರಿಗೆ ಬಂದಿದ್ದರು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪ್ರೀತಿ ಗೆಹ್ಲೋಟ್ ತಿಳಿಸಿದರು.

19ರಂದು ಕಚೇರಿಗೆ ಬಂದಾಗ ಸಿಬ್ಬಂದಿಯಲ್ಲಿ ಜ್ವರದ ಲಕ್ಷಣಗಳಿತ್ತು. ತಕ್ಷಣ ಅವರ ಗಂಟಲ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸೋಮವಾರ ವರದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈದ್ ಅಂಗವಾಗಿ ಸೋಮವಾರ ಕಚೇರಿಗೆ ರಜೆ ಇದ್ದ ಕಾರಣ ಸ್ಯಾನಿಟೈಸ್ ಮಾಡಲಾಗಿಲ್ಲ. ಮಂಗಳವಾರ ಇಡೀ ಕಚೇರಿಯನ್ನು ಸ್ವಚ್ಛಗೊಳಿಸಿ ಮುಚ್ಚಲಾಗುವುದು ಎಂದು ತಿಳಿಸಿದರು.

ಸೋಂಕಿತ ವ್ಯಕ್ತಿಯ ಜತೆಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 4 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಉಳಿದವರನ್ನು ಮಂಗಳವಾರ ಪರೀಕ್ಷೆಗೊಳಪಡಿಸಲಾಗುವುದು. ಎಲ್ಲ ಸಂಪರ್ಕಿತರನ್ನು ಹೋಂ ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.