ADVERTISEMENT

ಉಡುಪಿ ಮಹಿಳೆಗೆ ಕೋವಿಡ್‌: ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 14:55 IST
Last Updated 4 ಏಪ್ರಿಲ್ 2020, 14:55 IST

ಉಡುಪಿ: ಮಂಗಳೂರಿನಲ್ಲಿ ಉಡುಪಿ ಮೂಲದ 63 ವರ್ಷದ ಮಹಿಳೆಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಸೋಂಕಿತರ ಜತೆ ಸಂಪರ್ಕ ಹೊಂದಿದ್ದ 32 ಮಂದಿ 14 ದಿನಗಳ ಹೋಂ ಕ್ವಾರಂಟೈನ್‌ ಪೂರೈಸಿದ್ದಾರೆ. ಮುಂದಿನ 14 ದಿನ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುವುದು ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಶನಿವಾರ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ 6 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಟ್ಟು 30 ರೋಗಿಗಳ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನಾಲ್ಕು ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಡಿಎಚ್‌ಒ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT