ADVERTISEMENT

ಕೃಷಿ ಪುನಶ್ಚೇತನ ಆದ್ಯತೆ ಆಗಲಿ

ಕೃಷಿ ಅಭಿಯಾನಕ್ಕೆ ಶಾಸಕ ರಘುಪತಿ ಭಟ್ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 3:55 IST
Last Updated 27 ಜುಲೈ 2021, 3:55 IST
ಬ್ರಹ್ಮಾವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೈಪಿಡಿಯನ್ನು ಶಾಸಕ ರಘುಪತಿ ಭಟ್ ಬಿಡುಗಡೆಗೊಳಿಸಿದರು.
ಬ್ರಹ್ಮಾವರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೈಪಿಡಿಯನ್ನು ಶಾಸಕ ರಘುಪತಿ ಭಟ್ ಬಿಡುಗಡೆಗೊಳಿಸಿದರು.   

ಬ್ರಹ್ಮಾವರ: ಕರಾವಳಿ ಭಾಗ ಸೇರಿದಂತೆ ದೇಶದಲ್ಲಿ ಕೃಷಿ ನಶಿಸಿ ಹೋಗುತ್ತಿದೆ. ಪೂರಕ ಚಟುವಟಿಕೆ ಮೂಲಕ ಕೃಷಿಗೆ ಪುನಶ್ಚೇತನ ನೀಡಬೇಕು ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.

ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಸೋಮವಾರ ಇಲ್ಲಿ ಆಯೋಜಿಸಿದ್ದ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ, ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ, ಸಮಗ್ರ ಕೃಷಿ ಮಾಹಿತಿ ರಥ, ಬೆಳೆ ಸಮೀಕ್ಷೆ ರಥ, ಬೆಳೆ ವಿಮೆ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೃಷಿ ಇಲಾಖೆಯಿಂದ ಹಲವಾರು ಯೋಜನೆಗಳು ರೈತರಿಗೆ ಲಭ್ಯವಿದ್ದು, ಮಾಹಿತಿಯ ಕೊರತೆಯಿಂದಾಗಿ ಅದು ರೈತರನ್ನು ತಲುಪುತ್ತಿಲ್ಲ. ಇದನ್ನು ಪ್ರಚುರಪಡಿಸಲು ಕೃಷಿ ಅಭಿಯಾನ ಸಹಕಾರಿಯಾಗಿದೆ. ಇದುವರೆಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ₹ 10 ಸಾವಿರ ಎಲ್ಲ ರೈತರಿಗೂ ಸಿಗುತ್ತಿದೆ. ಹಡಿಲು ಭೂಮಿ ಹೊಂದಿರುವ ರೈತರಿಗೆ ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ಯಾವುದೇ ಪ್ರಯೋಜನ ಸಿಗುವುದಿಲ್ಲ ಎಂದು ತಿಳಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ ಅವರು ಕೃಷಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ, ಹಂದಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಪೂಜಾರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್, ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಲಕ್ಷ್ಮಣ್, ಕೋಟ ಕೃಷಿ ಅಧಿಕಾರಿ ಸುಪ್ರಭಾ, ಡಾ.ಅರುಣ್ ಕುಮಾರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಪಕ್ಷದ ಪ್ರಮುಖರಾದ ಬಿರ್ತಿ ರಾಜೇಶ್ ಶೆಟ್ಟಿ , ಕೃಷಿ ಇಲಾಖೆ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.