ADVERTISEMENT

19ರಂದು ಕೃಷ್ಣ ಜನ್ಮಾಷ್ಟಮಿ; 20ರಂದು ವಿಟ್ಲಪಿಂಡಿ ಉತ್ಸವ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 12:39 IST
Last Updated 18 ಆಗಸ್ಟ್ 2022, 12:39 IST
ಕೃಷ್ಣಮಠದಲ್ಲಿ ಆ.19ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾವಿರಾರು ಚಕ್ಕುಲಿಗಳನ್ನು ತಯಾರಿಸಲಾಗಿದೆ.
ಕೃಷ್ಣಮಠದಲ್ಲಿ ಆ.19ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾವಿರಾರು ಚಕ್ಕುಲಿಗಳನ್ನು ತಯಾರಿಸಲಾಗಿದೆ.   

ಉಡುಪಿ: ಕೃಷ್ಣಮಠದಲ್ಲಿ ಆ.19ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ 20ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ ತಯಾರಿ ಕಾರ್ಯಕ್ಕೆ ಗುರುವಾರ ಮಠದಲ್ಲಿ ಚಾಲನೆ ನೀಡಲಾಯಿತು. ವಿಟ್ಲಪಿಂಡಿಯ ದಿನ ಭಕ್ತರಿಗೆ ಪ್ರಸಾದವಾಗಿ ಚಕ್ಕುಲಿ ಹಾಗೂ ಉಂಡೆಗಳನ್ನು ವಿತರಿಸಲಾಗುತ್ತದೆ.

19ರಂದು ಮಧ್ಯರಾತ್ರಿ ಶುಭ ಮೂಹೂರ್ತದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. 20ರಂದು ಮಧ್ಯಾಹ್ನ ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.

ADVERTISEMENT

ಅಂದು ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.