ADVERTISEMENT

ಉಡುಪಿ: ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:40 IST
Last Updated 15 ಸೆಪ್ಟೆಂಬರ್ 2025, 4:40 IST
<div class="paragraphs"><p>ಉಡುಪಿ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ನಿಮಿತ್ತ ಭಾನುವಾರ ಪರ್ಯಾಯ ಪುತ್ತಿಗೆ ‌ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಬಾಲಗೋಪಾಲ ಅಲಂಕಾರ‌ದ ದೇವರಿಗೆ ಪೂಜೆ ನೆರವೇರಿಸಿದರು</p></div>

ಉಡುಪಿ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ನಿಮಿತ್ತ ಭಾನುವಾರ ಪರ್ಯಾಯ ಪುತ್ತಿಗೆ ‌ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಬಾಲಗೋಪಾಲ ಅಲಂಕಾರ‌ದ ದೇವರಿಗೆ ಪೂಜೆ ನೆರವೇರಿಸಿದರು

   

ಉಡುಪಿ: ಉಡುಪಿಯಲ್ಲಿ ಸೌರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುತ್ತಿದ್ದು, ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಭಾನುವಾರ ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ರಾಜಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಮೇಳೈಸಿದ್ದವು. ಪರ್ಯಾಯ ಪುತ್ತಿಗೆ ಮಠದ ಸುಶ್ರೀಂದ್ರತೀರ್ಥ ಸ್ವಾಮೀಜಿ ಕೃಷ್ಣನಿಗೆ ಬಾಲಗೋಪಾಲ ಅಲಂಕಾರ‌ ಮಾಡಿದ್ದರು. ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನಡೆಸಿದರು.

ADVERTISEMENT

ಜನ್ಮಾಷ್ಟಮಿ ಅಂಗವಾಗಿ ನಡೆದ ‘ಸ್ವಾಮಿ ಶ್ರೀ ಕೃಷ್ಣಾಯ ನಮಃ’ 1008 ಬಾರಿ ಮಂತ್ರ ಪಠಣ ಕಾರ್ಯಕ್ರಮಕ್ಕೆ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು. ಹಬ್ಬದ ಪ್ರಯುಕ್ತ ಕೃಷ್ಣ ಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದರು.

ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಭಕ್ತರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು. ರಥ‌ಬೀದಿ ಹಾಗೂ ಕೃಷ್ಣಮಠವನ್ನು ಹೂವು, ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.