ADVERTISEMENT

30ರಂದು ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:05 IST
Last Updated 27 ಏಪ್ರಿಲ್ 2025, 16:05 IST
ಪುತ್ತಿಗೆ ಶ್ರೀ
ಪುತ್ತಿಗೆ ಶ್ರೀ   

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯ ಪರ್ವದಿನವಾದ ಏ. 30ರಂದು ಸಂಜೆ 4ಗಂಟೆಗೆ ಕೃಷ್ಣ ಮಠದ ವಸಂತ ಮಹಲ್ ಮಧ್ವಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೆಯ ಚಿನ್ನ ನೀಡಲು ಅವಕಾಶವಿದೆ. ಜೊತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು ಎಂದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ದಿವಾನ್ ನಾಗರಾಜ ಆಚಾರ್ಯ, ರಮೇಶ್ ಭಟ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.