ಮಡಿಕೇರಿ: ಕೊಡಗಿನ ಗಡಿಭಾಗ ಸಂಪಾಜೆಯಲ್ಲಿ ಶುಕ್ರವಾರ ಮಧ್ಯಾಹ್ನ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಸುಳ್ಯ ಪೊಲೀಸರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಇವರು ಬೆಂಗಳೂರಿನಲ್ಲಿ ವಾಸವಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ 2 ಕುಟುಂಬದ 9 ಮಂದಿ ತೆರಳುತ್ತಿದ್ದರು. ಇವರಲ್ಲಿ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.
ಒಬ್ಬ ಪುರುಷ ಹಾಗೂ ಒಂದು ಮಗುವಿನ ಪರಿಸ್ಥಿತಿ ತೀರಾ ಗಂಭೀರವಾಗಿದೆ. ಮತ್ತೊಂದು ಮಗು ಅಪಾಯದಿಂದ ಪಾರಾಗಿದೆ. ಮೃತಪಟ್ಟವರಲ್ಲಿ ಶೀಲಾ ಹಾಗೂ ಮಂಜುನಾಥ್ ಎಂಬ ಇಬ್ಬರ ಹೆಸರಷ್ಟೇ ಇಲ್ಲಿಯವರೆಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ. ಮೃತಪಟ್ಟ ಹಾಗೂ ಗಾಯಗೊಂಡ ಎಲ್ಲರನ್ನು ಸುಳ್ಯದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.