ADVERTISEMENT

ಕೆಎಸ್‌ಆರ್‌ಟಿಸಿ ಇಲ್ಲ: ಖಾಸಗಿ ಬಸ್ ಸಂಚಾರಕ್ಕೆ ಅಡ್ಡಿ ಇಲ್ಲ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 6:36 IST
Last Updated 7 ಏಪ್ರಿಲ್ 2021, 6:36 IST
ಜಿಲ್ಲೆಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿಲ್ಲ.
ಜಿಲ್ಲೆಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿಲ್ಲ.   

ಉಡುಪಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿಲ್ಲ.

ಖಾಸಗಿ ಬಸ್‌ಗಳ ಸಂಚಾರ ಎಂದಿನಂತಿದೆ. ಜಿಲ್ಲೆಯ ಎಲ್ಲ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳ ಸಂಚಾರ ಇರುವುದರಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಓಡಾಡುವ ಹಾಗೂ ಉಡುಪಿ ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರಿಗೆಸಮಸ್ಯೆಯಾಗಲಿಲ್ಲ.

ಹೊರ ಜಿಲ್ಲೆಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಬಂದಿದ್ದ ಕೆಲವು ಪ್ರಯಾಣಿಕರಿಗೆ ಸಮಸ್ಯೆಯಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.