ADVERTISEMENT

ಕುಂದಾಪುರ | ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ: ರೋಷನ್ ಶೆಟ್ಟಿ ದೂರು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 5:18 IST
Last Updated 17 ಸೆಪ್ಟೆಂಬರ್ 2025, 5:18 IST
ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ನಂಜಾ ನಾಯ್ಕ್ ಅವರನ್ನು ಭೇಟಿಯಾದ ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ವಿರುದ್ಧ ದೂರು ನೀಡಿದ್ದಾರೆ
ಕುಂದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ನಂಜಾ ನಾಯ್ಕ್ ಅವರನ್ನು ಭೇಟಿಯಾದ ಬಿಜೆಪಿ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ವಿರುದ್ಧ ದೂರು ನೀಡಿದ್ದಾರೆ   

ಕುಂದಾಪುರ: ಬಿಜೆಪಿಯ ಧ್ವಜ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೋಲುವ ಹಾಗೂ ದಂಗೆ ಎದ್ದಿರುವ ಜನರ ವ್ಯಂಗ್ಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ರೋಷನ್ ಶೆಟ್ಟಿ ವಿರುದ್ಧ ಇಲ್ಲಿನ ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ನೇತೃತ್ವದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ, ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಮಂಡಲ ಉಪಾಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಕುಂದಾಪುರ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ, ಮಂಡಲ ಯುವ ಮೋರ್ಚಾ ಕಾರ್ಯದರ್ಶಿ, ರಂಜಿತ್ ದೇವಾಡಿಗ, ಪುರಸಭೆ ಸದಸ್ಯರಾದ ರಾಘವೇಂದ್ರ ಖಾರ್ವಿ, ಗಿರೀಶ್ ದೇವಾಡಿಗ, ಪ್ರಮುಖರಾದ ದಿವಾಕರ್ ಕಡ್ಗಿ, ನಾಗರಾಜ್ ಕಾಂಚನ್ ನೇತೃತ್ವದಲ್ಲಿ ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ್ ಅವರನ್ನು ಭೇಟಿಯಾಗಿ ಪ್ರಕರಣ ದಾಖಲಿಸುವಂತೆ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT