ಕುಂದಾಪುರ:‘ಕಚ್ಚಾ ತೈಲದ ಬೆಲೆ ಇಳಿಕೆಯಾದರೂ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ನಿಯಂತ್ರಿಸದ ಕೇಂದ್ರ ಸರ್ಕಾರ, ಈಗ ಅಡುಗೆ ಅನಿಲದ ದರವನ್ನೂ ಹೆಚ್ಚಿಸುವ ಮೂಲಕ ಬಡವರ ಬದುಕಿನ ಮೇಲೆ ಬರೆ ಎಳೆದಿದೆ ಎಂದು ಕಾಂಗ್ರೆಸ್ ಉಡುಪಿ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದರು.
ಕೇಂದ್ರ ಸರ್ಕಾರದ ಜನ ವಿರೋಧಿ ಆಡಳಿತ ಮತ್ತು ಬೆಲೆ ಏರಿಕೆ ಖಂಡಿಸಿ, ಯುವ ಕಾಂಗ್ರೆಸ್ ವತಿಯಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ರೈತರಿಗೆ ನೆರವಾಗಬೇಕು ಎನ್ನುವ ಒಳ್ಳೆಯ ಉದ್ದೇಶದಿಂದ ಹಾಲಿನ ದರವನ್ನು ಏರಿಸಿದ್ದರೂ, ಈ ವಿಚಾರದ ಸಂಪೂರ್ಣ ಮಾಹಿತಿ ಇಲ್ಲದೆ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿಯು ತನ್ನ ರೈತ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ’ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ಹೇಳಿದರು.
ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ಮಾತನಾಡಿ, ‘ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ಅನ್ಯಾಯ ಮಾಡುತ್ತಿದೆ’ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಜಿಲ್ಲಾ ಕಿರಣ್ ಹೆಗ್ಡೆ, ಅಭಿಜಿತ್ ಪೂಜಾರಿ ಹೇರಿಕುದ್ರು, ಚಂದ್ರ ಅಮೀನ್, ವಿಶ್ವಾಸ್ ಶೆಟ್ಟಿ, ಮುನಾಫ್ ಕೋಡಿ, ಸುಜನ್ ಶೆಟ್ಟಿ, ಜಾನಕಿ ಬಿಲ್ಲವ, ಸವಿತಾ, ಗಣಪತಿ ಶೇಟ್, ನಾರಾಯಣ ಆಚಾರ್ಯ ಕೋಣಿ, ಆಶಾ ಕರ್ವೆಲ್ಲೊ, ಅರುಣ್ ಪಟೇಲ್, ವೇಲಾ ಬ್ರಗಾಂಜಾ, ಸಲಾಂ ತೆಕ್ಕಟ್ಟೆ, ಜಯಕರ ಕಾಳಾವರ, ಜೊಸೆಫ್ ಆನಗಳ್ಳಿ, ಸತೀಶ್ ನಾಯ್ಕ್ ಆನಗಳ್ಳಿ, ಜಾಕ್ಸನ್ ಡಿಸೋಜಾ ಆನಗಳ್ಳಿ, ಗೀತಾ ಎಸ್., ರೋಶನ್ ಬರೆಟ್ಟೋ ಇದ್ದರು. ಜೊಯ್ಸ್ಟನ್ ಡಿಸೋಜಾ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.