ಉಡುಪಿ: ಕುಂದಾಪುರ ತಾಲ್ಲೂಕಿನ ತೆಕ್ಕಟ್ಟೆಯಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗನೂ ಮೃತಪಟ್ಟಿದ್ದಾರೆ.
ಮಾಧವ ದೇವಾಡಿಗ (55), ಪುತ್ರ ಪ್ರಸಾದ್ ದೇವಾಡಿಗ (22) ಮೃತಪಟ್ಟವರು.
ಮಾಧವ ದೇವಾಡಿಗ ಅವರ ಪತ್ನಿಯೂ ಬಾವಿಗೆ ಹಾರಿದ್ದು, ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಕುಂದಾಪುರದವರಾದ ಮಾಧವ ದೇವಾಡಿಗ ಅವರ ಕುಟುಂಬವು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.