ಕುಂದಾಪುರ: ಇಲ್ಲಿನ ಭಂಡಾರ್‌ಕಾರ್ಸ್ ಕಾಲೇಜಿನ ಮಹಿಳಾ ಸಂಘದ ಆಶ್ರಯದಲ್ಲಿ ಬುಧವಾರ ಮಹಿಳಾ ದಿನ ಆಚರಿಸಲಾಯಿತು.
ಕೊಲ್ಲೂರು ಪೊಲೀಸ್ ಠಾಣೆಯ ಎಸ್ಐ ಸುಧಾರಾಣಿ ಟಿ. ಅವರು, ಸೈಬರ್ ಅಪರಾಧ ತಡೆಗಟ್ಟುವಿಕೆ ಮತ್ತು ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಕೊಲ್ಲೂರು ಪೊಲೀಸ್ ಠಾಣೆಯ ಸಿಬ್ಬಂದಿ ನವೀನ್ ಅವರು, ರಸ್ತೆ ಸುರಕ್ಷತಾ ಕ್ರಮಗಳು ಮತ್ತು ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಪ್ರಾಂಶುಪಾಲ ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಮಹಿಳಾ ಸಂಘದ ಸಂಚಾಲಕಿ ಮೀನಾಕ್ಷಿ ಎನ್. ಎಸ್ ಇದ್ದರು.
ವಿದ್ಯಾರ್ಥಿನಿಯರಾದ ಶ್ರೇಯಾ ಸ್ವಾಗತಿಸಿದರು. ಶಮಿತಾ ಮತ್ತು ಕಾವ್ಯಶ್ರೀ ಅತಿಥಿಗಳನ್ನು ಪರಿಚಯಿಸಿದರು. ಬೀಬಿ ಅಫ್ರಾ ನಿರೂಪಿಸಿದರು. ಆಯಿಶಾ ಮರಿಯಮ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.