ಕುಂದಾಪುರ: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿಗೆ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ.
ಬಸ್ರೂರು ಶಾರದಾ ಕಾಲೇಜಿನಲ್ಲೂ ಹಿಜಾಬ್ ಧರಿಸಿಬಂದ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಕುಂದಾಪುರದ ಆರ್‌ಎನ್ ಶೆಟ್ಟಿ ಕಾಲೇಜಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲುಧರಿಸಿ ಹಳೆ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ಮೆರವಣಿಗೆ ನಡೆಸಿದರು. ಬಳಿಕ ಪ್ರಾಂಶುಪಾಲರ ಸೂಚನೆಯಂತೆ ವಿದ್ಯಾರ್ಥಿಗಳು ಕೇಸರಿಶಾಲು ತೆಗೆದಿಟ್ಟು ಕಾಲೇಜು ಪ್ರವೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.