ADVERTISEMENT

ಡಿಸಿಎಂಗೆ ವರದಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 7:42 IST
Last Updated 10 ಜನವರಿ 2026, 7:42 IST
ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ನಿಯೋಗದ ಸದಸ್ಯರು ವರದಿ ಸಲ್ಲಿಸಿದರು.
ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ನಿಯೋಗದ ಸದಸ್ಯರು ವರದಿ ಸಲ್ಲಿಸಿದರು.   

ಕುಂದಾಪುರ: ಬಳ್ಳಾರಿಯಲ್ಲಿ ನಡೆದ ಅಹಿತಕರ ಘಟನೆಗಳು, ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣದ ಪರಿಸ್ಥಿತಿ ಅವಲೋಕನ ನಡೆಸಿ ವರದಿ ನೀಡಲು ಕೆಪಿಸಿಸಿಯಿಂದ ನೇಮಕವಾದ ಕಾಂಗ್ರೆಸ್ ನಿಯೋಗ ಶನಿವಾರ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿತು  ಎಂದು ನಿಯೋಗದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ನಿಯೋಗದ ಸದಸ್ಯರಾ‌ದ ರಾಜ್ಯ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಮುಖಂಡ ಕುಮಾರ್ ನಾಯಕ್, ಶಾಸಕ ಟಿ. ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಜಕ್ಕಪ್ಪನವರ, ಬಸವನಗೌಡ ಬಾದರ್ಲಿ ಇದ್ದರು.

ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಜ. 3ರಂದು ಬಳ್ಳಾರಿಗೆ ತೆರಳಿದ್ದ ನಿಯೋಗದ ಸದಸ್ಯರು, ಪರಿಸ್ಥಿತಿ ಅವಲೋಕನ ನಡೆಸಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು, ಇಲಾಖಾ ಮುಖ್ಯಸ್ಥರು, ಇತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿ ವಿಸ್ತ್ರತ ವರದಿ ಸಲ್ಲಿಸಿದೆ ಎಂದು ಹೆಗ್ಡೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.