ಕುಂದಾಪುರ: ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡದಂತೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ ಆರ್. ಗುಂಡೂರಾವ್ ಅವರನ್ನು ಭೇಟಿ ಮಾಡಿದ ಅವರು, ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಜ್ಞ ವೈದ್ಯರನ್ನು ಸ್ಥಳಾಂತರಿಸುತ್ತಿರುವ ಪ್ರಕ್ರಿಯೆ ಕಂಡು ಬಂದಿದೆ. ಸ್ಥಳೀಯವಾಗಿ ಆಸ್ಪತ್ರೆಗಳು ಇಲ್ಲದಿರುವುದರಿಂದ ಗ್ರಾಮೀಣ ಭಾಗದ ಬಡ ಅನಾರೋಗ್ಯ ಪೀಡಿತರು, ಮಕ್ಕಳು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ.
ವೈದ್ಯರನ್ನು ಸ್ಥಳಾಂತರಿಸುವದರಿಂದ ಗ್ರಾಮೀಣ ಭಾಗದ ಜನರು ತಜ್ಞ ವೈದ್ಯಕೀಯ ಸೇವೆಯಿಂದ ವಂಚಿತರಾಗುತ್ತಾರೆ. ಆದ್ದರಿಂದ ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಾದ ಬ್ರಹ್ಮಾವರ, ಕೋಟ, ಬೈಂದೂರು ಆಸ್ಪತ್ರೆಗಳಲ್ಲಿನ ತಜ್ಞ ವೈದ್ಯರನ್ನು ಸ್ಥಳಾಂತರ ಮಾಡಬಾರದು ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.