ADVERTISEMENT

ನಾಗಬೊಬ್ಬರ್ಯ, ಹ್ಯಾಗುಳಿ ದೇವಸ್ಥಾನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 16:11 IST
Last Updated 29 ಮಾರ್ಚ್ 2023, 16:11 IST

ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ರಾಯಲ್ ಸಭಾಭವನದ ಬಳಿಯ ಸ್ಯಾಬ್ರಮಕ್ಕಿಯಲ್ಲಿರುವ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವಸ್ಥಾನದ 8ನೇ ವರ್ಷದ ವಾರ್ಷಿಕ ವರ್ಧಂತ್ಯುತ್ಸವ ಏ.1ರಂದು ನಡೆಯಲಿದೆ.

ನಾರಾಯಣ ಹೊಳ್ಳ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಅಂದು ಬೆಳಿಗ್ಗೆ 7.30ಕ್ಕೆ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ ವಾಚನ, ನಾಗದೇವರಿಗೆ, ಬೊಬ್ಬರ್ಯ, ಹ್ಯಾಗುಳಿ ಮತ್ತು ಶ್ರೀ ಕೀಳು ದೇವರಿಗೆ ಕಲಶ ಸ್ಥಾಪನೆ, ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ.

ಬೆಳಿಗ್ಗೆ 10 ರಿಂದ ನಾಗದರ್ಶನ ಕಾರ್ಯಕ್ರಮ ನಾಗಪಾತ್ರಿಗಳಾದ ಬೀಜಾಡಿ ಶಂಕರನಾರಾಯಣ ಬಾಯರಿ ಅವರಿಂದ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಪಲ್ಲ ಪೂಜೆ ‌ಹಾಗೂ 12:30ಕ್ಕೆ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಶ್ರೀ ಮಾಸ್ತಿಯಮ್ಮ ಭಜನಾ ಮಂಡಳಿ, ಮದ್ದುಗುಡ್ಡೆ- ಕುಂದಾಪುರ ಅವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 8 ಗಂಟೆಯಿಂದ ವಿಶೇಷ ರಂಗಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 9 ರಿಂದ ಗೋಳಿಗರಡಿ ಮೇಳ ಸಾಸ್ತಾನ ಇವರಿಂದ ಗೋಳಿಗರಡಿ ಕ್ಷೇತ್ರಮಹಾತ್ಮೆ ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ವಿ. ಅಣ್ಣಪ್ಪ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.