
ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ತೆಕ್ಕಟ್ಟೆ ಕಾರ್‌ಟೆಕ್ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಪ್ರಥಮೇಶ್ (23), ಓಂಕಾರ್ (23), ಓಂ ಗಣೇಶ (23), ಕಾರ್ತೀಕ್ (23), ಸುಜನ್(23) ಗಾಯಗೊಂಡವರು. ಅವರನ್ನು ಚಿಕಿತ್ಸೆಗಾಗಿ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓಂಕಾರ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲರೂ ಮಹಾರಾಷ್ಟ್ರದ ಪುಣೆಯ ಕಾನೂನು ಮತ್ತು ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು. ಒಟ್ಟು 12 ವಿದ್ಯಾರ್ಥಿಗಳು ಜನವರಿ 31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದರು. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳೀಯರು ಹಾಗೂ ತೆಕ್ಕಟ್ಟೆ ಫ್ರೆಂಡ್ಸ್ ಸದಸ್ಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸೇರಿಸಲು ಸಹಕರಿಸಿದರು. ಕೋಟ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್ ಸ್ಥಳಕ್ಕೆ ಭೇಟಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.