ADVERTISEMENT

ಕೆಎಂಸಿಯಲ್ಲಿ ಕೋವಿಡ್‌ ಪ್ರಯೋಗಾಲಯ ಆರಂಭ

​ಪ್ರಜಾವಾಣಿ ವಾರ್ತೆ
Published 19 ಮೇ 2020, 15:35 IST
Last Updated 19 ಮೇ 2020, 15:35 IST

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮಂಗಳವಾರ ಕೋವಿಡ್-19 ಪ್ರಯೋಗಾಲಯ ಕಾರ್ಯಾರಂಭ ಮಾಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ ಶೆಟ್ಟಿ ತಿಳಿಸಿದ್ದಾರೆ.

ಕಸ್ತೂರಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಈಚೆಗೆ ಅನುಮತಿ ನೀಡಿದ್ದು, ಅದರಂತೆ ಪ್ರಯೋಗಾಲಯ ಆರಂಭಿಸಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕೋವಿಡ್ ಪರೀಕ್ಷೆಗೆ ಅನುಮೋದನೆ ಪಡೆದ ಮೊದಲ ಆಸ್ಪತ್ರೆ ಕೆಎಂಸಿ ಆಗಿದೆ. ಮುಂದೆ ತ್ವರಿತವಾಗಿ ಸೋಂಕಿತ ವ್ಯಕ್ತಿಗಳ ಮಾದರಿಗಳ ಪರೀಕ್ಷಾ ವರದಿಗಳನ್ನು ಪಡೆಯಲು ಸಹಾಯವಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಂದ ಸಂಗ್ರಹಿಸಿದ ಮಾದರಿಗಳ ಪರೀಕ್ಷೆಗೆ ನೆರವಾಗಲಿದೆ. ಜತೆಗೆ, ಮಂಗಳೂರು ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ. ಪ್ರಯೋಗಾಲಯ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.