
ಉಡುಪಿ: ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಗುರುವಾರ ನಗರದ ಜೋಡುಕಟ್ಟೆಯ ಬಳಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಅದಕ್ಕೂ ಮೊದಲು ನಗರದ ಕೆಎಸ್‌ಆರ್‌ಟಿಸಿ ಹಳೆ ಬಸ್ ನಿಲ್ದಾಣದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಚಿಂತಕ ಕೆ. ಫಣಿರಾಜ್, ಕಳೆದ 12 ವರ್ಷಗಳಿಂದ ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವದ ಎಲ್ಲಾ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.
ಬಂಡವಾಳಶಾಹಿಗಳಿಗೆ ಪರವಾದ ಮತ್ತು ಕಾರ್ಮಿಕರಿಗೆ ಮಾರಕವಾದ ನೀತಿಗಳನ್ನು ಕೇಂದ್ರ ಸರ್ಕಾರ ಅನುಸರಿಸುತ್ತದೆ ಎಂದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ಸುರೇಶ್ ಕಲ್ಲಾಗರ, ಕವಿರಾಜ್ ಎಸ್. ಕಾಂಚನ್, ಕಿರಣ್ ಹೆಗ್ಡೆ, ನಾಗೇಶ್ ನಾಯಕ್ ಉಪಸ್ಥಿತರಿದ್ದರು.
ಬಳಿಕ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.