ADVERTISEMENT

ಜುಲೈ 20ಕ್ಕೆ ‘ಲಗೋರಿ’ ಸಡಗರ

​ಪ್ರಜಾವಾಣಿ ವಾರ್ತೆ
Published 26 ಜೂನ್ 2025, 13:11 IST
Last Updated 26 ಜೂನ್ 2025, 13:11 IST
ಕುಂದಾಪುರದ ಕಲಾಕ್ಷೇತ್ರ ಕಚೇರಿಯ ಪ್ರಾಂಗಾಣದಲ್ಲಿ ನಡೆದ ‘ಲಗೋರಿ’ ಗ್ರಾಮೀಣ ಕ್ರೀಡಾ ಸಡಗರದ ಪೂರ್ವಭಾವಿ ಸಭೆಯಲ್ಲಿ ಕಲಾಕ್ಷೇತ್ರ ಅಧ್ಯಕ್ಷ ಬಿ.ಕಿಶೋರಕುಮಾರ ಮಾತನಾಡಿದರು
ಕುಂದಾಪುರದ ಕಲಾಕ್ಷೇತ್ರ ಕಚೇರಿಯ ಪ್ರಾಂಗಾಣದಲ್ಲಿ ನಡೆದ ‘ಲಗೋರಿ’ ಗ್ರಾಮೀಣ ಕ್ರೀಡಾ ಸಡಗರದ ಪೂರ್ವಭಾವಿ ಸಭೆಯಲ್ಲಿ ಕಲಾಕ್ಷೇತ್ರ ಅಧ್ಯಕ್ಷ ಬಿ.ಕಿಶೋರಕುಮಾರ ಮಾತನಾಡಿದರು   

ಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನದ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ವತಿಯಿಂದ ನೆಡೆಯುವ ‘ಲಗೋರಿ’ ಗ್ರಾಮೀಣ ಕ್ರೀಡಾಕೂಟದ ಪೂರ್ವಭಾವಿ ಸಭೆ ನಗರದ ಕಲಾಕ್ಷೇತ್ರ ಕಚೇರಿಯ ಪ್ರಾಂಗಾಣದಲ್ಲಿ ನಡೆಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಕೆ.ವಿಕಾಸ್ ಹೆಗ್ಡೆ, ಪುರಸಭೆಯ ಮಾಜಿ ಉಪಾಧ್ಯಕ್ಷ ರಾಜೀವ್ ಕೋಟ್ಯಾನ್, ದೈಹಿಕ ಶಿಕ್ಷಣ ಶಿಕ್ಷಕರಾದ ಅರುಣ್ ಶೆಟ್ಟಿ, ಚಂದ್ರಶೇಖರ ಬೀಜಾಡಿ, ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಲಯನ್ಸ್ ಕ್ಲಬ್‌ನ ರಮಾನಂದ ಗಾಣಿಗ ಮತ್ತು ಕ್ರೀಡಾಪಟು ಪ್ರದೀಪ್‌ಚಂದ್ರ ಶೆಟ್ಟಿ ಅವರು ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸುವ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ಕಲಾಕ್ಷೇತ್ರ ಸಂಸ್ಥೆಯ ಅಧ್ಯಕ್ಷ ಬಿ.ಕಿಶೋರಕುಮಾರ ಮಾತನಾಡಿ, ‘ಜುಲೈ 20ರಂದು ಬೆಳಿಗ್ಗೆ 9ಕ್ಕೆ ಕುಂದಾಪುರ ಬೋರ್ಡ್ ಹೈಸ್ಕೂಲಿನ ಮೈದಾನದಲ್ಲಿ ಕ್ರೀಡಾಕೂಟ ಆರಂಭವಾಗಲಿದೆ’ ಎಂದರು.

ADVERTISEMENT

ಕಲಾಕ್ಷೇತ್ರ ಸಂಸ್ಥೆಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಕ್ರೀಡಾಪಟುಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.