ADVERTISEMENT

ನಿವೇಶನ ರಹಿತರಿಗೆ ನಿವೇಶನ ಮಂಜೂರುಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸಭೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 4:29 IST
Last Updated 22 ಜುಲೈ 2025, 4:29 IST
ಕಾಪು ತಾಲ್ಲೂಕಿನ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಶನಿವಾರ ಕಾಪು ತಹಶೀಲ್ದಾರ್‌ ಕಚೇರಿಯಲ್ಲಿ ಸಭೆ ನಡೆಸಿದರು
ಕಾಪು ತಾಲ್ಲೂಕಿನ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಶನಿವಾರ ಕಾಪು ತಹಶೀಲ್ದಾರ್‌ ಕಚೇರಿಯಲ್ಲಿ ಸಭೆ ನಡೆಸಿದರು   

ಕಾಪು (ಪಡುಬಿದ್ರಿ): ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ನಿವೇಶನ ಗುರುತಿಸಿ, ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಕಾಪು ತಾಲ್ಲೂಕಿನ 16 ಗ್ರಾಮ ಪಂಚಾಯಿತಿ ಹಾಗೂ ಕಾಪು ಪುರಸಭೆ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶನಿವಾರ ತಹಶೀಲ್ದಾರ್‌ರ ಕಚೇರಿಯಲ್ಲಿ ಸಭೆ ನಡೆಸಿದರು.

ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡುವ ಬಗ್ಗೆ ಚರ್ಚಿಸಿ, 94ಸಿ ಮತ್ತು 94ಸಿಸಿಯಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಶೀಘ್ರವೇ ಹಕ್ಕುಪತ್ರ ಮಂಜೂರು ಮಾಡುವಂತೆ ಹಾಗೂ  53/57ರಲ್ಲಿ ಅಕ್ರಮ–ಸಕ್ರಮ ಸಮಿತಿಯಲ್ಲಿ ಮಂಡಿಸಿ ಪುರಸ್ಕೃತಗೊಂಡ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗೆ ಶೀಘ್ರವೇ ಜಮೀನು ಮಂಜೂರು ಮಾಡುವಂತೆ ತಿಳಿಸಿದರು.

ADVERTISEMENT

20ಕ್ಕೂ ಅಧಿಕ ವರ್ಷಗಳಿಂದ ವಾಸವಾಗಿರುವ ಕೋಟೆ ಗ್ರಾ.ಪಂ.. ವ್ಯಾಪ್ತಿಯ ರಘುನಾಥ್ ಕೋಟ್ಯಾನ್, ಕಟಪಾಡಿ ಗ್ರಾ.ಪಂ. ವ್ಯಾಪ್ತಿಯ ಬೇಬಿ ಪಾಲನ್, ಮಜೂರು ಗ್ರಾ.ಪಂ. ವ್ಯಾಪ್ತಿಯ ಸರಸ್ವತಿ, ಪಡುಬಿದ್ರಿ ಗ್ರಾ.ಪಂ. ವ್ಯಾಪ್ತಿಯ ಇಮಾನುವೆಲ್ ಪ್ರಕಾಶ್, ಯಜ್ಞೇಶ್, ಬಸಪ್ಪ ಸೇರಿದಂತೆ ಒಟ್ಟು 6 ಫಲಾನುಭವಿಗಳಿಗೆ 94/ಅ ಹಾಗೂ 94/ಅಅ ಅಡಿಯಲ್ಲಿ ಕಾಯಂ ನಿವೇಶನ ಹಕ್ಕುಪತ್ರ ವಿತರಿಸಲಾಯಿತು.

ಕಾಪು ತಹಶೀಲ್ದಾರ್‌ ಪ್ರತೀಭಾ ಆರ್., ಕಂದಾಯ ನಿರೀಕ್ಷಕ ಶಬೀರ್ ಹಾಗೂ ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.