ADVERTISEMENT

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ: ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 5:15 IST
Last Updated 10 ಜುಲೈ 2022, 5:15 IST
ಘಾಟಿಯ ನಾಲ್ಕನೆ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ
ಘಾಟಿಯ ನಾಲ್ಕನೆ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ   

ಹೆಬ್ರಿ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದ್ದು ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಘಾಟಿಯ ನಾಲ್ಕನೆ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ.

ಗುಡ್ಡ ತೆರವು ಕಾರ್ಯ ಅರಂಭವಾಗಿದ್ದರೂ ವಾಹನಗಳ ಸುಗಮ ಸಂಚಾರಕ್ಕೆ ಸಮಯ ಬೇಕಾಗಬಹುದು‌. ನಿರಂತರ ಸುರಿಯುತ್ತಿರುವ ಮಳೆಯಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ.

ಹಲವು ದಿನಗಳಿಂದ ಹೆಬ್ರಿ ತಾಲ್ಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಪರಿಸರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕರಾವಳಿ ಹಾಗೂ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಉಡುಪಿ ಶಿವಮೊಗ್ಗ ಜಿಲ್ಲೆಗಳ ನಡುವಿನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ADVERTISEMENT

ಸದ್ಯ ವಾಹನಗಳು ಬದಲಿ ಮಾರ್ಗದಲ್ಲಿ ಉಡುಪಿ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಕರಾವಳಿ ಭಾಗಕ್ಕೆ ಬರಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.