ADVERTISEMENT

ತಾಂತ್ರಿಕ ಶಿಕ್ಷಣದೊಂದಿಗೆ ಆಡಳಿತ ಕೌಶಲ ಅರಿಯಿರಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 5:31 IST
Last Updated 5 ಡಿಸೆಂಬರ್ 2022, 5:31 IST
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ. ತಾಂತ್ರಿಕ ಕಾಲೇಜಿನ ವಿವಿಧ ಸಂಘಗಳ ಚಟುವಟಿಕೆಗಳನ್ನು ಎಂ.ಆರ್.ಪಿ.ಎಲ್‌ನ ಕಾರ್ಪೊರೇಟ್ ಕಮ್ಯೂನಿಕೇಶನ್ಸ್ ವಿಭಾಗದ ಪ್ರಧಾನ ವ್ಯವಸ್ಥಾಪಕ ರುಡಾಲ್ಫ್ ವಿ.ಜೆ ನೊರೊನ್ಹಾ ಉದ್ಘಾಟಿಸಿ ಮಾತನಾಡಿದರು
ಕಾರ್ಕಳ ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ. ತಾಂತ್ರಿಕ ಕಾಲೇಜಿನ ವಿವಿಧ ಸಂಘಗಳ ಚಟುವಟಿಕೆಗಳನ್ನು ಎಂ.ಆರ್.ಪಿ.ಎಲ್‌ನ ಕಾರ್ಪೊರೇಟ್ ಕಮ್ಯೂನಿಕೇಶನ್ಸ್ ವಿಭಾಗದ ಪ್ರಧಾನ ವ್ಯವಸ್ಥಾಪಕ ರುಡಾಲ್ಫ್ ವಿ.ಜೆ ನೊರೊನ್ಹಾ ಉದ್ಘಾಟಿಸಿ ಮಾತನಾಡಿದರು   

ಕಾರ್ಕಳ: ‘ತಾಂತ್ರಿಕ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಆಡಳಿತ ಕೌಶಲಗಳನ್ನೂ ಅರಿತಿರುವುದು ಅಗತ್ಯ’ ಎಂದು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ವಿಭಾಗದ ಪ್ರಧಾನ ವ್ಯವಸ್ಥಾಪಕ ರುಡಾಲ್ಫ್ ವಿ.ಜೆ ನೊರೊನ್ಹಾ ಹೇಳಿದರು.

ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ. ತಾಂತ್ರಿಕ ಕಾಲೇಜಿನ ವಿವಿಧ ಸಂಘಗಳ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಮಾತನಾಡಿ, ಸ್ಮಾರ್ಟ್ ವರ್ಕ್, ಸಾರ್ವಜನಿಕ ಸಂಪರ್ಕ ಹಾಗೂ ಉತ್ತಮ ಸಂವಹನಶೀಲತೆ ನಾಯಕತ್ವ ಗುಣದ ಪ್ರಮುಖ ಭಾಗ ಎಂದರು. ಕಾಲೇಜಿನ 11 ವಿದ್ಯಾರ್ಥಿ ಸಂಘಗಳ ವಿವಿಧ ವಿಷಯಗಳ ಪದಾಧಿಕಾರಿಗಳಿಗೆ ಬ್ಯಾಜ್ ವಿತರಿಸಲಾಯಿತು. ನಿಟ್ಟೆ ವಿಶ್ವವಿದ್ಯಾಲಯದ ಕುಲಸಚಿವೆ ಡಾ.ರೇಖಾ ಭಂಡಾರ್ಕರ್ ಸ್ವಾಗತಿಸಿ ದರು. ಮನಿಷಾ ಶೆಟ್ಟಿ ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಡೀನ್ ಡಾ.ನರಸಿಂಹ ಬೈಲ್ಕೇರಿ ವಂದಿಸಿದರು. ವಿದ್ಯಾರ್ಥಿನಿ ಶರಣ್ಯ ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ತೇಜಸ್ ಬಾಳಿಗ ಮತ್ತು ಸಿದ್ಧಿ ಶೆಣೈ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.