ಉಡುಪಿ: ವಿದ್ಯಾರ್ಥಿಗಳು ಲೌಕಿಕ ಶಿಕ್ಷಣದ ಜೊತೆಗೆ ಆಧ್ಯಾತ್ಮ ವಿದ್ಯೆಯನ್ನೂ ಕಲಿತು ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.
ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪಡೆದ ಸಹಾಯವನ್ನು ದಾನದ ರೂಪದಲ್ಲಿ ಮುಂದಿನ ಪೀಳಿಗೆಗೆ ತಲುಪಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.
ಪುತ್ತಿಗೆ ಕಿರಿಯ ಯತಿ ಸುಶ್ರೀಂದ್ರತೀರ್ಥ ಶ್ರೀಪಾದ ಆಶೀವರ್ಚನ ನೀಡಿದರು. ಧಾರವಾಡದ ವಿದ್ಯಾಪೋಷಕ್ ಸ್ಥಾಪಕ ವಿಶ್ವಸ್ಥ ಪ್ರಮೋದ್ ಕುಲಕರ್ಣಿ, ಕೋಟದ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್, ಮುಂಬೈ ಒಎನ್ ಜಿಸಿ ನಿವೃತ್ತ ಸಿಜಿಎಂ ಬನ್ನಾಡಿ ನಾರಾಯಣ ಆಚಾರ್, ಉದ್ಯಮಿ ಹರೀಶ್ ರಾಯಸ್, ಬೀಜಾಡಿ ನಾಗರಾಜ ರಾವ್, ಸಾಯಿರಾಧ ಸಮೂಹ ಸಂಸ್ಥೆಗಳ ಮನೋಹರ ಎಸ್.ಶೆಟ್ಟಿ ಇದ್ದರು. ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.